alex Certify
ಕನ್ನಡ ದುನಿಯಾ       Mobile App
       

Kannada Duniya

ನಾಳಿನ ಪಂದ್ಯಕ್ಕೆ ಅಡ್ಡಿಯಾಗಬಹುದು ಮಳೆ

ಟೀಂ ಇಂಡಿಯಾ ಹಾಗೂ ನ್ಯೂಜಿಲ್ಯಾಂಡ್ ನಡುವಣ ಮಂಗಳವಾರ ಮೂರನೇ ಹಾಗೂ ಅಂತಿಮ ಟಿ-20 ಪಂದ್ಯ ನಡೆಯಲಿದೆ. ಉಭಯ ತಂಡಗಳು ಸಮಬಲ ಸಾಧಿಸಿರುವ ಕಾರಣ ಮುಂದಿನ ಪಂದ್ಯ ಕುತೂಹಲ ಮೂಡಿಸಿದೆ. ತಿರುವನಂತಪುರಂನಲ್ಲಿ ಕೊನೆಯ ಪಂದ್ಯ ನಡೆಯಲಿದ್ದು, ಟೀಂ ಇಂಡಿಯಾ ಗೆಲುವಿಗೆ ರಣತಂತ್ರ ರೂಪಿಸಿದೆ.

ಮೊದಲ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಟೀಂ ಇಂಡಿಯಾ 53 ರನ್ ಗಳ ಗೆಲುವು ಸಾಧಿಸಿತ್ತು. ಎರಡನೇ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ 40 ರನ್ ಗಳ ಗೆಲುವು ಸಾಧಿಸಿದೆ. ಆದ್ರೆ ಮೂರನೇ ಪಂದ್ಯಕ್ಕೆ ಮಳೆರಾಯ ಅಡ್ಡಿಯುಂಟು ಮಾಡುವ ಸಾಧ್ಯತೆಯಿದೆ.

ಕೇರಳದ ರಾಜಧಾನಿಯಲ್ಲಿ ಕಳೆದ ಮೂರು ದಿನಗಳಿಂದ ಸತತ ಮಳೆಯಾಗ್ತಿದೆ. ಮಂಗಳವಾರ ಕೂಡ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಒಂದು ವೇಳೆ ಆಟದ ಆರಂಭಕ್ಕಿಂತ ಮೊದಲು ಮಳೆಯಾದ್ರೆ ಚಿಂತೆ ಮಾಡುವ ಅಗತ್ಯವಿಲ್ಲ. ಕೇವಲ 30 ನಿಮಿಷದಲ್ಲಿ ಮೈದಾನವನ್ನು ಒಣಗಿಸುವುದಾಗಿ ಸಿಬ್ಬಂದಿ ಭರವಸೆ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...