alex Certify
ಕನ್ನಡ ದುನಿಯಾ       Mobile App
       

Kannada Duniya

ಕೋಚ್ ಹುದ್ದೆಗೆ ರವಿಶಾಸ್ತ್ರಿ, ದ್ರಾವಿಡ್, ಜಹೀರ್ ಖಾನ್

shastri-vi

ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಕೊನೆಗೂ ಟೀಂ ಇಂಡಿಯಾ ಮುಖ್ಯ ಕೋಚ್ ಹುದ್ದೆಗೆ ನೇಮಕ ಮಾಡಿದೆ.

ರವಿಶಾಸ್ತ್ರಿ ಮುಖ್ಯ ಕೋಚ್ ಆಗಿದ್ದು, ಜಹೀರ್ ಖಾನ್ ಅವರನ್ನು ಬೌಲಿಂಗ್ ಕೋಚ್ ಆಗಿ ನೇಮಕ ಮಾಡಲಾಗಿದೆ. ಅದೇ ರೀತಿ ಬ್ಯಾಟಿಂಗ್ ಕೋಚ್ ಆಗಿ ಸಂಜಯ್ ಬಂಗಾರ್ ಮುಂದುವರೆಯಲಿದ್ದಾರೆ.

ಭಾರತೀಯ ಟೆಸ್ಟ್ ತಂಡ ವಿದೇಶ ಪ್ರವಾಸ ಕೈಗೊಳ್ಳುವ ಸಂದರ್ಭದಲ್ಲಿ ರಾಹುಲ್ ದ್ರಾವಿಡ್ ಬ್ಯಾಟಿಂಗ್ ಕೋಚ್ ಆಗಿ ಸಲಹೆ ನೀಡಲಿದ್ದಾರೆ.

ಬಿ.ಸಿ.ಸಿ.ಐ. ಕಾರ್ಯದರ್ಶಿ ಅಮಿತಾಬ್ ಚೌಧರಿ ಈ ಮಾಹಿತಿ ನೀಡಿದ್ದು, 2019 ರ ವಿಶ್ವಕಪ್ ವರೆಗೂ ರವಿಶಾಸ್ತ್ರಿ ಮುಖ್ಯ ಕೋಚ್ ಆಗಿರುತ್ತಾರೆ ಎಂದು ತಿಳಿಸಿದ್ದಾರೆ.

ಅನಿಲ್ ಕುಂಬ್ಳೆ ಟೀಂ ಇಂಡಿಯಾ ಕೋಚ್ ಹುದ್ದೆಗೆ ರಾಜೀನಾಮೆ ನೀಡಿದ ಬಳಿಕ ಹಲವರ ಹೆಸರು ಕೇಳಿ ಬಂದಿದ್ದವಾದರೂ, ರವಿಶಾಸ್ತ್ರಿಯವರೇ ಆಯ್ಕೆಯಾಗಲಿದ್ದಾರೆ ಎಂಬುದು ಓಪನ್ ಸೀಕ್ರೆಟ್ ಆಗಿತ್ತು.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...