alex Certify
ಕನ್ನಡ ದುನಿಯಾ       Mobile App
       

Kannada Duniya

ಐ.ಸಿ.ಸಿ. ಸದಸ್ಯತ್ವಕ್ಕೆ ರಾಜೀನಾಮೆ ಕೊಟ್ಟ ರವಿಶಾಸ್ತ್ರಿ

ravi-shastri

ನವದೆಹಲಿ: ಭಾರತ ಕ್ರಿಕೆಟ್ ತಂಡದ ಪ್ರಧಾನ ಕೋಚ್ ಹುದ್ದೆಯ ಮೇಲೆ ಕಣ್ಣಿಟ್ಟಿದ್ದ ರವಿಶಾಸ್ತ್ರಿ ಅವರಿಗೆ ನಿರಾಸೆಯಾಗಿದೆ. ಪ್ರಧಾನ ಕೋಚ್ ಹುದ್ದೆಗೆ ನೇಮಕವಾಗಿರುವ ಅನಿಲ್ ಕುಬ್ಳೆ ಈಗಾಗಲೇ ಕಾರ್ಯಾರಂಭ ಮಾಡಿದ್ದಾರೆ.

ತಮಗೆ ಕೋಚ್ ಹುದ್ದೆ ಸಿಗದಿದ್ದರಿಂದ ಬೇಸರಗೊಂಡಿರುವ ರವಿಶಾಸ್ತ್ರಿ ಅವರು, ಬಿ.ಸಿ,ಸಿ.ಐ. ಸಲಹಾ ಸಮಿತಿ ಸದಸ್ಯರಾಗಿದ್ದ ಸೌರವ್ ಗಂಗೂಲಿ ವಿರುದ್ಧ ಕಿಡಿಕಾರಿದ್ದರು. ಇದೀಗ, ರವಿಶಾಸ್ತ್ರಿ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ಕ್ರಿಕೆಟ್ ಸಮಿತಿ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಸಮಿತಿಗೆ ಅನಿಲ್ ಕುಂಬ್ಳೆ ಅಧ್ಯಕ್ಷರಾಗಿರುವ ಕಾರಣ ರವಿಶಾಸ್ತ್ರಿ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಐ.ಸಿ.ಸಿ.ಕ್ರಿಕೆಟ್ ಸಮಿತಿಯ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ರವಿಶಾಸ್ತ್ರಿ ಸ್ಪಷ್ಟಪಡಿಸಿದ್ದಾರೆ.

ಕಳೆದ 6 ವರ್ಷಗಳಿಂದ ಸಮಿತಿಯಲ್ಲಿ ಕಾರ್ಯ ನಿರ್ವಹಿಸಿದ್ದೇನೆ. ವೈಯಕ್ತಿಕ ಕಾರಣಗಳಿಂದ ಸಮಿತಿಯ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ. ವೀಕ್ಷಕ ವಿವರಣೆ ಸೇರಿದಂತೆ ಕ್ರಿಕೆಟ್ ನಲ್ಲಿ ಹಲವು ಕೆಲಸ ನಿರ್ವಹಿಸಲಿರುವ ಕಾರಣ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...