alex Certify
ಕನ್ನಡ ದುನಿಯಾ       Mobile App
       

Kannada Duniya

ಸಚಿನ್ ಹೇಳಿಕೆ ಮೇರೆಗೆ ಅರ್ಜಿ ಸಲ್ಲಿಸಿರಲಿಲ್ಲ: ರವಿಶಾಸ್ತ್ರಿ

ravi_1499932458_618x347

ಮಾಜಿ ಕ್ರಿಕೆಟರ್ ರವಿ ಶಾಸ್ತ್ರಿ ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಆಯ್ಕೆಯಾಗಿದ್ದಾರೆ. ಮಂಗಳವಾರ ಅವರನ್ನು ಮುಖ್ಯ ಕೋಚ್ ಆಗಿ ಆಯ್ಕೆ ಮಾಡಲಾಗಿದೆ. ಗುರುವಾರ ರವಿಶಾಸ್ತ್ರಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಯಾವ ಕಾರಣಕ್ಕೆ ಟೀಂ ಇಂಡಿಯಾ ಕೋಚ್ ಸ್ಥಾನಕ್ಕಾಗಿ ಅರ್ಜಿ ಸಲ್ಲಿಸಿದ್ರು ಎಂಬ ವಿಷಯವನ್ನು ಸ್ಪಷ್ಟಪಡಿಸಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದ ಶಾಸ್ತ್ರಿ, ಕೋಚ್ ಸ್ಥಾನಕ್ಕಾಗಿ ಮೊದಲು ಅರ್ಜಿ ಸಲ್ಲಿಸಿರಲಿಲ್ಲ. ನಂತ್ರ ಸಮಯದ ಗಂಭೀರತೆ ಅರಿತು ಅರ್ಜಿ ಸಲ್ಲಿಸಿದೆ ಎಂದು ಶಾಸ್ತ್ರಿ ಹೇಳಿದ್ದಾರೆ. ಟೀಂ ಹೇಗೆ ಬೆಳೆದಿದೆ ಎಂಬುದನ್ನು ನಾನು ನೋಡಿದ್ದೇನೆ. ಮಧ್ಯದಲ್ಲಿ ಟೀಂ ಕೈಬಿಡುವುದು ಸರಿಯಲ್ಲ ಎನ್ನುವ ಕಾರಣಕ್ಕೆ ಅರ್ಜಿ ಸಲ್ಲಿಸಿದೆ. ಕುಂಬ್ಳೆ ರಾಜೀನಾಮೆ ನಂತ್ರ ಬಿಸಿಸಿಐ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಿತ್ತು. ಆ ವೇಳೆ ನನಗೆ ಗಂಭೀರತೆ ಅರ್ಥವಾಯ್ತು ಎಂದಿದ್ದಾರೆ ಶಾಸ್ತ್ರಿ.

ಕ್ರಿಕೆಟ್ ಸಲಹಾ ಸಮಿತಿ ಸದಸ್ಯ ಸಚಿನ್ ತೆಂಡೂಲ್ಕರ್, ಶಾಸ್ತ್ರಿಗೆ ಅರ್ಜಿ ಸಲ್ಲಿಸುವಂತೆ ಹೇಳಿದ್ದರು ಎಂಬ ವದಂತಿ ಬಗ್ಗೆ ಸರಿಯಾಗಿ ಉತ್ತರ ನೀಡದ ಶಾಸ್ತ್ರಿ, ಸಚಿನ್ ಹೇಳಿಕೆಯಿಂದ ಅರ್ಜಿ ಸಲ್ಲಿಸಿಲ್ಲ, ಗಂಭೀರತೆ ಪರಿಗಣಿಸಿ ಅರ್ಜಿ ಸಲ್ಲಿಸಿದ್ದೆ ಎಂದಷ್ಟೇ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...