alex Certify
ಕನ್ನಡ ದುನಿಯಾ       Mobile App
       

Kannada Duniya

ಒಲಿಂಪಿಕ್ಸ್ ನಲ್ಲಿ ಭಾರತೀಯಳ ಐತಿಹಾಸಿಕ ಸಾಧನೆ

dipa olympic

ರಿಯೋ ಡಿ ಜನೈರೋ: ಬ್ರೆಜಿಲ್ ರಾಜಧಾನಿ ರಿಯೋ ಡಿ ಜನೈರೋದಲ್ಲಿ ನಡೆಯುತ್ತಿರುವ ಜಾಗತಿಕ ಕ್ರೀಡಾಹಬ್ಬ ಒಲಿಂಪಿಕ್ಸ್ ನಲ್ಲಿ ಭಾರತದ ಕ್ರೀಡಾಪಟು ಒಬ್ಬರು ಐತಿಹಾಸಿಕ ಸಾಧನೆ ಮಾಡಿದ್ದು, ಜಿಮ್ನಾಸ್ಟಿಕ್ಸ್ ಸ್ಪರ್ಧೆಯಲ್ಲಿ ಫೈನಲ್ ಪ್ರವೇಶಿಸಿದ್ದಾರೆ.

ಭಾರತದ ಭರವಸೆಯ ಕ್ರೀಡಾಪಟುವಾಗಿರುವ ದೀಪಾ ಕರ್ಮಾಕರ್ ಅವರು ಜಿಮ್ನಾಸ್ಟಿಕ್ಸ್ ವೈಯಕ್ತಿಕ ವಿಭಾಗದ ಸ್ಪರ್ಧೆಯಲ್ಲಿ ಫೈನಲ್ ಸುತ್ತಿಗೆ ಅರ್ಹತೆ ಪಡೆದುಕೊಂಡಿದ್ದಾರೆ. ಈ ಸಾಧನೆ ಮಾಡಿದ ಮೊದಲ ಭಾರತೀಯಳೆಂಬ ಕೀರ್ತಿಗೆ ಅವರು ಪಾತ್ರವಾಗಿದ್ದಾರೆ. ಅರ್ಹತಾ ಸುತ್ತಿನ ಪಂದ್ಯಗಳಲ್ಲಿ ದೀಪಿಕಾ ಕರ್ಮಾಕರ್ 14.850 ಅಂಕಗಳೊಂದಿಗೆ 8ನೇ ಸ್ಥಾನ ಗಳಿಸಿ ವೈಯಕ್ತಿಕ ವಿಭಾಗದಲ್ಲಿ ಫೈನಲ್ ಸ್ಪರ್ಧೆಗೆ ಪ್ರವೇಶ ಪಡೆದುಕೊಂಡಿದ್ದಾರೆ. ಭಾರತೀಯರೊಬ್ಬರು ಈ ವಿಭಾಗದ ಸ್ಪರ್ಧೆಯಲ್ಲಿ ಫೈನಲ್ ತಲುಪಿರುವುದು ಇದೇ ಪ್ರಥಮ ಎನ್ನಲಾಗಿದೆ.

ರಿಯೋ ಡಿ ಜನೈರೋದಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ ಸ್ಪರ್ಧೆಯಲ್ಲಿ ಮೊದಲ 2 ದಿನ ಭಾರತಕ್ಕೆ ನಿರಾಸೆಯಾಗಿದ್ದರೂ, ಜಿಮ್ನಾಸ್ಟಿಕ್ಸ್ ನಲ್ಲಿ ದೀಪಾ ಕರ್ಮಾಕರ್ ಅವರು ಫೈನಲ್ ತಲುಪಿರುವುದು ಸಾಧನೆಯಾಗಿದೆ. ದೀಪಾ 14.850 ಅಂಕ ಗಳಿಸಿ ಫೈನಲ್ ಪ್ರವೇಶಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...