alex Certify
ಕನ್ನಡ ದುನಿಯಾ       Mobile App
       

Kannada Duniya

ರೋಹಿತ್ ಶರ್ಮಾ ಬ್ಯಾಟ್ ನಿಂದ ಸಿಡಿದಿದೆ 16ನೇ ಶತಕ

ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಹೀನಾಯ ಸೋಲು ಅನುಭವಿಸಿದ್ದ ಟೀಂ ಇಂಡಿಯಾ, ಎರಡನೇ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಿದೆ. ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ನಾಯಕನ ಜವಾಬ್ಧಾರಿ ನಿರ್ವಹಿಸುತ್ತಿರುವ ರೋಹಿತ್ ಶರ್ಮಾ ಸೆಂಚುರಿ ಬಾರಿಸಿದ್ದಾರೆ.

ಇದು 2017ರಲ್ಲಿ ರೋಹಿತ್ ಬ್ಯಾಟ್ ನಿಂದ ಸಿಡಿದ 6ನೇ ಶತಕ. ಈ ಮೂಲಕ ಏಕದಿನ ಕ್ರಿಕೆಟ್ ನಲ್ಲಿ ರೋಹಿತ್ 16ನೇ ಶತಕ ದಾಖಲಿಸಿದ್ದಾರೆ. ಧರ್ಮಶಾಲಾದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಕೇವಲ 2 ರನ್ ಗೆ ರೋಹಿತ್ ಔಟಾಗಿದ್ದರು. ಭಾರತ ತಂಡ 112 ರನ್ ಗಳಿಗೆ ಸರ್ವಪತನ ಕಂಡಿತ್ತು.

ಆದ್ರೆ ಮೊಹಾಲಿಯಲ್ಲಿ ಎಚ್ಚರಿಕೆಯ ಆಟವಾಡಿದ ರೋಹಿತ್ ಹಾಗೂ ಶಿಖರ್ ಧವನ್ ಮೊದಲ ವಿಕೆಟ್ ಗೆ 115ರನ್ ಕಲೆಹಾಕಿದ್ರು. ಧವನ್ ಔಟಾದ ಬಳಿಕ ಶ್ರೇಯಸ್ ಅಯ್ಯರ್, ರೋಹಿತ್ ಶರ್ಮಾಗೆ ಸಾಥ್ ನೀಡಿದ್ರು. ವೆಸ್ಟ್ ಇಂಡೀಸ್ ಸರಣಿಯಲ್ಲಿ ವಿಶ್ರಾಂತಿ ಪಡೆದಿದ್ದ ರೋಹಿತ್, ಲಂಕಾ ಸಿರೀಸ್ ನಲ್ಲಿ ಕಮ್ ಬ್ಯಾಕ್ ಮಾಡಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...