alex Certify
ಕನ್ನಡ ದುನಿಯಾ       Mobile App
       

Kannada Duniya

2 ನೇ ಟಿ -20 ಯಲ್ಲಿ ರೋಹಿತ್ ಶರ್ಮಾ ಭರ್ಜರಿ ಶತಕ

ಇಂದೋರ್: ಇಂದೋರ್ ನ ಹೋಳ್ಕರ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟಿ -20 ಸರಣಿಯ 2 ನೇ ಪಂದ್ಯದಲ್ಲಿ ಮೊದಲಿಗೆ ಬ್ಯಾಟಿಂಗ್ ಮಾಡಿದ ಭಾರತದ ಪರ ರೋಹಿತ್ ಶರ್ಮಾ ಭರ್ಜರಿ ಶತಕ ಗಳಿಸಿದ್ದಾರೆ.

ಟಾಸ್ ಗೆದ್ದ ಶ್ರೀಲಂಕಾ ನಾಯಕ ತಿಸಾರ ಪೆರೆರಾ ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ. ಮೊದಲಿಗೆ ಬ್ಯಾಟಿಂಗ್ ಮಾಡಿದ ಭಾರತದ ಪರವಾಗಿ ಲೋಕೇಶ್ ರಾಹುಲ್ ಮತ್ತು ರೋಹಿತ್ ಶರ್ಮಾ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ.

ಆರಂಭದಿಂದಲೂ ಶ್ರೀಲಂಕಾ ಬೌಲರ್ ಗಳನ್ನು ಮನಬಂದಂತೆ ದಂಡಿಸಿದ ರೋಹಿತ್ ಶರ್ಮಾ 35 ಎಸೆತಗಳಲ್ಲಿ 8 ಸಿಕ್ಸರ್, 11 ಬೌಂಡರಿ ಒಳಗೊಂಡ 101 ರನ್ ಗಳಿಸಿದ್ದಾರೆ. ಕೆ.ಎಲ್. ರಾಹುಲ್ 46 ರನ್ ಗಳಿಸಿದ್ದಾರೆ.

ಭಾರತ 11.2 ಓವರ್ ಗಳಲ್ಲಿ ವಿಕೆಟ್ ನಷ್ಟವಿಲ್ಲದೇ 148 ರನ್ ಗಳಿಸಿದೆ. ಆಟ ಮುಂದುವರೆದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...