alex Certify
ಕನ್ನಡ ದುನಿಯಾ       Mobile App
       

Kannada Duniya

ಪಂಜಾಬ್ ವಿರುದ್ಧ ಭರ್ಜರಿ ಜಯಗಳಿಸಿದ ಕೊಹ್ಲಿ ಬಾಯ್ಸ್

ಇಂದೋರ್: ಇಲ್ಲಿನ ಹೋಳ್ಕರ್ ಕ್ರೀಡಾಂಗಣದಲ್ಲಿ ನಡೆದ ಐ.ಪಿ.ಎಲ್. ಪಂದ್ಯದಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಆರ್.ಸಿ.ಬಿ. 10 ವಿಕೆಟ್ ಅಂತರದಿಂದ ಜಯಗಳಿಸಿದೆ.

ವಿರಾಟ್ ಕೊಹ್ಲಿ, ಪಾರ್ಥಿವ್ ಪಟೇಲ್ ಭರ್ಜರಿ ಬ್ಯಾಟಿಂಗ್ ನಿಂದ ಕಿಂಗ್ಸ್ ಇಲೆವನ್ ಪಂಜಾಬ್ ತಂಡವನ್ನು ಮಣಿಸಲಾಗಿದೆ. ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ನಡೆಸಿದ ಪಂಜಾಬ್ ತಂಡ 15.1 ಓವರ್ ಗಳಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡು 88 ರನ್ ಗಳಿಸಿತು. ಕೆ.ಎಲ್. ರಾಹುಲ್ 21, ಕ್ರಿಸ್ ಗೇಲ್ 18, ಆರೋನ್ ಫಿಂಚ್ 26 ರನ್ ಗಳಿಸಿದರು. ಆರ್.ಸಿ.ಬಿ. ಪರವಾಗಿ ಉಮೇಶ್ ಯಾದವ್ 3 ವಿಕೆಟ್ ಪಡೆದರು.

89 ರನ್ ಗೆಲುವಿನ ಗುರಿ ಬೆನ್ನತ್ತಿದ ಆರ್.ಸಿ.ಬಿ. ವಿಕೆಟ್ ನಷ್ಟವಿಲ್ಲದೇ, 8.1 ಓವರ್ ಗಳಲ್ಲಿ 92 ರನ್ ಗಳಿಸುವ ಮೂಲಕ 10 ವಿಕೆಟ್ ಗಳಿಂದ ಭರ್ಜರಿ ಜಯ ದಾಖಲಿಸಿದೆ. ವಿರಾಟ್ ಕೊಹ್ಲಿ ಅಜೇಯ 48, ಪಾರ್ಥಿವ್ ಪಟೇಲ್ ಅಜೇಯ 40 ರನ್ ಗಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಅತಂತ್ರ ವಿಧಾನಸಭೆ ಸೃಷ್ಟಿಯಾದ ಬಳಿಕ ರಾಜ್ಯದಲ್ಲಿ ಆರಂಭವಾಗಿದೆಯಾ ಶಾಸಕರ ಕುದುರೆ ವ್ಯಾಪಾರ?

    View Results

    Loading ... Loading ...