alex Certify
ಕನ್ನಡ ದುನಿಯಾ       Mobile App
       

Kannada Duniya

ಇಂದಿನ ಆಟಕ್ಕೆ ಬದಲಾಯ್ತು ವಿರಾಟ್ ಸೇನೆಯ ಜರ್ಸಿ

ipl-m

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ ಸಿಬಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಸೆಣೆಸಾಟ ಶುರುಮಾಡಿದೆ. ಟಾಸ್ ಗೆದ್ದ ಕೆಕೆಆರ್ ಬೌಲಿಂಗ್ ಆಯ್ದುಕೊಂಡಿದೆ. ಐಪಿಎಲ್ ಆವೃತ್ತಿಯಲ್ಲಿ ಸದಾ ರೆಡ್ ಜರ್ಸಿಯಲ್ಲಿ ಕಾಣಿಸಿಕೊಳ್ತಿದ್ದ ಆರ್ ಸಿಬಿ ಜರ್ಸಿ ಇಂದು ಬದಲಾಗಿದೆ. ಕೆಂಪು ಜೆರ್ಸಿ ಬದಲು ಹಸಿರು ಜೆರ್ಸಿ ತೊಟ್ಟು ಮೈದಾನಕ್ಕಿಳಿದಿದೆ.

ಪರಿಸರ ಸಂರಕ್ಷಣಾ ಸಂದೇಶ ಸಾರುವ ಹಿನ್ನೆಲೆಯಲ್ಲಿ ಆರ್ ಸಿಬಿ ಹಸಿರು ಜೆರ್ಸಿ ತೊಟ್ಟು ಮೈದಾನಕ್ಕಿಳಿದಿದೆ. 2011ರಲ್ಲಿ ಮೊದಲ ಬಾರಿ ತಂಡ ಹಸಿರು ಜೆರ್ಸಿ ತೊಟ್ಟು ಆಟವಾಡಿತ್ತು. ಇದಾದ ನಂತ್ರ ಫ್ರ್ಯಾಂಚೈಸಿ ಗೋ ಗ್ರೀನ್ ಅಭಿಯಾನವನ್ನು ಮುಂದುವರೆಸಿಕೊಂಡು ಬಂದಿದೆ.

ಪ್ರತಿವರ್ಷವೂ ಜಾಗತಿಕ ತಾಪಮಾನ ಹೆಚ್ಚಳದ ಬಗ್ಗೆ ಜನರನ್ನು ಜಾಗೃತಗೊಳಿಸಿ ಪರಿಸರ ಸಂರಕ್ಷಣೆ ಬಗ್ಗೆ ಸಂದೇಶ ಸಾರಲು ಒಂದೊಂದು ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದೆ. ಹಿಂದಿನ ಬಾರಿ ಸೈಕಲ್ ಮೇಲೆ ಮೈದಾನಕ್ಕೆ ಬಂದು ಆಟಗಾರರು ಜನರಲ್ಲಿ ಜಾಗೃತಿ ಮೂಡಿಸುವ ಪ್ರಯತ್ನ ಮಾಡಿದ್ದರು.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...