alex Certify
ಕನ್ನಡ ದುನಿಯಾ       Mobile App
       

Kannada Duniya

ಕಾಡಿನಲ್ಲಿ ಸಚಿನ್ ತೆಂಡೂಲ್ಕರ್ ಸುತ್ತಾಟ

sachin 88

ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಕಾಡಿನಲ್ಲಿ ಸುತ್ತಾಟ ನಡೆಸಿದ್ದಾರೆ. ಕ್ರಿಕೆಟ್ ನಿಂದ ನಿವೃತ್ತರಾದ ನಂತರ ಕುಟುಂಬ ಸದಸ್ಯರೊಂದಿಗೆ ಹೆಚ್ಚಿನ ಸಮಯ ಕಳೆಯುತ್ತಿರುವ ಸಚಿನ್ ತೆಂಡೂಲ್ಕರ್ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ವನ್ಯಜೀವಿ ಅಭಯಾರಣ್ಯಕ್ಕೆ ಭೇಟಿ ನೀಡಿದ್ದರು.

ಮಹಾರಾಷ್ಟ್ರದ ನಾಗ್ ಪುರ ಸಮೀಪದಲ್ಲಿರುವ ಉಮ್ರೇಡ್ ಕಾರ್ ಹಾಂಡ್ಲಾ ವನ್ಯಜೀವಿ ಅಭಯಾರಣ್ಯದಲ್ಲಿ ಸಚಿನ್ ತೆಂಡೂಲ್ಕರ್ ತಮ್ಮ ಕುಟುಂಬ ಸದಸ್ಯರೊಂದಿಗೆ ಕಾಲಕಳೆದರು. ಕಾಡಿನಲ್ಲಿ ತಾವಿರುವ ಫೋಟೋವನ್ನು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಪೋಸ್ಟ್ ಮಾಡಿ ತಾವು ಎಲ್ಲಿದ್ದೇನೆ ಎಂದು ಹೇಳಿ ನೋಡೋಣ ಎಂದು ಕೇಳಿದ್ದರು. ಅಂದಹಾಗೇ ಸಚಿನ್ ಕುಟುಂಬ ಸದಸ್ಯರ ಜೊತೆಯಲ್ಲಿ ಉಮ್ರೇಡ್ ಕಾರ್ ಹಾಂಡ್ಲಾ ವನ್ಯಜೀವಿ ಅಭಯಾರಣ್ಯಕ್ಕೆ ಭೇಟಿ ನೀಡಿದ್ದರು. ಅಲ್ಲದೇ, ಅಲ್ಲಿನ ಸಿಬ್ಬಂದಿಯೊಂದಿಗೆ ಚರ್ಚೆ ಕೂಡ ಮಾಡಿದ್ದಾರೆ.

ಕ್ರಿಕೆಟ್ ನಿಂದ ನಿವೃತ್ತರಾಗಿದ್ದರೂ ಕಳೆದ ತಿಂಗಳು ಅಮೆರಿಕದಲ್ಲಿ ಕ್ರಿಕೆಟ್ ಬೆಳವಣಿಗೆ ಬಗ್ಗೆ ಹಮ್ಮಿಕೊಂಡಿದ್ದ ಕಾರ್ಯಕ್ರಮ ಮತ್ತು ಪಂದ್ಯಾವಳಿಗಳಲ್ಲಿ ಸಚಿನ್ ಭಾಗವಹಿಸಿದ್ದರು. ರಾಜ್ಯಸಭೆ ಸದಸ್ಯರಾಗಿಯೂ ಸಚಿನ್ ಗಮನ ಸೆಳೆಯುವ ಕೆಲಸ ಮಾಡುತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...