alex Certify
ಕನ್ನಡ ದುನಿಯಾ       Mobile App
       

Kannada Duniya

ಈಗ ಬಯಲಾಯ್ತು ಸಚಿನ್ ನಿವೃತ್ತಿ ರಹಸ್ಯ

sachin s

ಮುಂಬೈ: ಭಾರತ ಕ್ರಿಕೆಟ್ ತಂಡದ ಆಯ್ಕೆ ಸಮಿತಿಯ ಮಾಜಿ ಮುಖ್ಯಸ್ಥ ಸಂದೀಪ್ ಪಾಟೀಲ್ ಅವರು, ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ನಿವೃತ್ತಿಯ ಗುಟ್ಟನ್ನು ಬಹಿರಂಗಪಡಿಸಿದ್ದಾರೆ.

2012 ರಲ್ಲಿ ಸಚಿನ್ ತೆಂಡೂಲ್ಕರ್ ಏಕದಿನ ಕ್ರಿಕೆಟ್ ಗೆ ನಿವೃತ್ತಿಯನ್ನು ಘೋಷಿಸದಿದ್ದರೆ, ಅವರನ್ನು ತಂಡದಿಂದ ಕೈ ಬಿಡುವ ಬಗ್ಗೆ ಆಯ್ಕೆ ಸಮಿತಿ ಯೋಚಿಸಿತ್ತು ಎಂದು ಸಂದೀಪ್ ಪಾಟೀಲ್ ತಿಳಿಸಿದ್ದಾರೆ. ಆಯ್ಕೆ ಸಮಿತಿ ಮುಖ್ಯಸ್ಥರಾಗಿದ್ದ ಸಂದೀಪ್ ಪಾಟೀಲ್ ತಮ್ಮ ಅವಧಿಯಲ್ಲಿನ ಅನುಭವಗಳನ್ನು ಹಂಚಿಕೊಂಡಿದ್ದು, ಸಚಿನ್ ತೆಂಡೂಲ್ಕರ್ ಅವರಿಗೆ 2012 ರ ಡಿಸೆಂಬರ್ ನಲ್ಲಿ ನಿಮ್ಮ ಮುಂದಿನ ಯೋಜನೆಗಳ ಬಗ್ಗೆ ಹೇಳಿ ಎಂದಾಗ, ಸದ್ಯಕ್ಕೆ ನಿವೃತ್ತಿ ಯೋಚನೆ ಇಲ್ಲ ಎಂದು ತಿಳಿಸಿದ್ದರೆನ್ನಲಾಗಿದೆ.

ಆದರೆ, ಸಚಿನ್ ಅವರನ್ನು ತಂಡದಿಂದ ಕೈ ಬಿಡಲು ಆಯ್ಕೆ ಸಮಿತಿಯಿಂದ ಒಮ್ಮತದ ತೀರ್ಮಾನ ಕೈಗೊಂಡು ಬಿ.ಸಿ.ಸಿ.ಐ. ಗೆ ತಿಳಿಸಲಾಗಿತ್ತು. ಆದರೆ, ಇದನ್ನು ತಿಳಿದ ಸಚಿನ್ ಅವರೇ, ಏಕದಿನ ಕ್ರಿಕೆಟ್ ನಿಂದ ನಿವೃತ್ತಿಯಾಗುವುದಾಗಿ ಘೋಷಿಸಿದರು. ಒಂದು ವೇಳೆ ಅವರು ಘೋಷಿಸದಿದ್ದರೆ, ನಾವೇ ಅವರನ್ನು ತಂಡದಿಂದ ಕೈ ಬಿಡುತ್ತಿದ್ದೆವು ಎಂದು ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...