alex Certify
ಕನ್ನಡ ದುನಿಯಾ       Mobile App
       

Kannada Duniya

ಸಾರಾ ತೆಂಡೂಲ್ಕರ್ ಫೋಟೋಗೆ ಕೆಲವೇ ಗಂಟೆಯಲ್ಲಿ ಸಿಕ್ತು ಲಕ್ಷಾಂತರ ಲೈಕ್ಸ್

ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಮಗಳು ಸಾರಾ ತೆಂಡೂಲ್ಕರ್ ಫೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಲಂಡನ್ ಕಾಲೇಜಿನಲ್ಲಿ ಓದುತ್ತಿರುವ ಸಾರಾ ಪದವಿ ವಿತರಣಾ ಸಮಾರಂಭದ ಫೋಟೋ ಹಂಚಿಕೊಂಡಿದ್ದಾಳೆ. ಸಾರಾ, ಫೋಟೋವನ್ನು ಸಾಮಾಜಿಕ ಜಾಲತಾಣಕ್ಕೆ ಹಾಕ್ತಿದ್ದಂತೆ ಫೋಟೋ ವೈರಲ್ ಆಗಿದೆ. ಕೆಲವೇ ಗಂಟೆಗಳಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಲೈಕ್ಸ್ ಸಿಕ್ಕಿದೆ.

ಸಾರಾ ಪದವಿ ಪಡೆದ ಫೋಟೋ ಹಾಕಿ `ನಾನೇನು ಮಾಡಿದ್ದೇನೆ?’ ಎಂದು ಶೀರ್ಷಿಕೆ ಹಾಕಿದ್ದಾಳೆ. ಲಂಡನ್ ನಲ್ಲಿ ನಡೆದ ಪದಕ ವಿತರಣಾ ಸಮಾರಂಭದಲ್ಲಿ ಸಚಿನ್ ತೆಂಡೂಲ್ಕರ್ ಹಾಗೂ ಅಂಜಲಿ ಕೂಡ ಪಾಲ್ಗೊಂಡಿದ್ದರು. ಸಾರಾ ಜೊತೆ ತಂದೆ ತೆಂಡೂಲ್ಕರ್ ಹಾಗೂ ತಾಯಿ ಅಂಜಲಿ ಫೋಟೋಕ್ಕೆ ಫೋಸ್ ನೀಡಿದ್ದಾರೆ.

ಸಾರಾ ತೆಂಡೂಲ್ಕರ್ ಲಂಡನ್ ನ ಯುನಿವರ್ಸಿಟಿ ಕಾಲೇಜಿನಲ್ಲಿ ಮೆಡಿಸಿನ್ ವಿಭಾಗದಲ್ಲಿ ಅಧ್ಯಯನ ಮಾಡ್ತಿದ್ದಾಳೆ. ಸಾರಾ ಲಂಡನ್ ಗೆ ಹೋಗುವ ಮೊದಲು ಮುಂಬೈನ ಧೀರೂಭಾಯಿ ಅಂಬಾನಿ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ವಿದ್ಯಾಭ್ಯಾಸ ಮಾಡಿದ್ದಳು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...