alex Certify
ಕನ್ನಡ ದುನಿಯಾ       Mobile App
       

Kannada Duniya

ಆಸ್ಪತ್ರೆ ಸೇರಿದ ‘ಕ್ರಿಕೆಟ್ ದೇವರು’ ಸಚಿನ್

sachin-tendulkar-surgery

ಕ್ರಿಕೆಟ್ ದೇವರು ಎಂದೇ ಖ್ಯಾತರಾದ, ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಆಸ್ಪತ್ರೆಯಲ್ಲಿದ್ದಾರೆ. ಸಚಿನ್ ಅವರು ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಇದನ್ನು ಸ್ವತಃ ಸಚಿನ್ ತೆಂಡೂಲ್ಕರ್ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಹಂಚಿಕೊಂಡಿದ್ದಾರೆ.

ಸಚಿನ್ ತೆಂಡೂಲ್ಕರ್ ಲಂಡನ್ ನ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಮೊಣಕಾಲಿನ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ. ನಿವೃತ್ತಿ ನಂತರ ತೊಂದರೆ ಅನುಭವಿಸುವಂತಾಗಿದೆ. ಇತ್ತೀಚೆಗೆ ತೊಂದರೆ ಕಾಡುತ್ತಿವೆ. ನಾನು ಶೀಘ್ರವೇ ಗುಣಮುಖನಾಗಿ ಆಸ್ಪತ್ರೆಯಿಂದ ಹೊರಬರುತ್ತೇನೆ ಎಂಬ ವಿಶ್ವಾಸವಿದೆ ಎಂದು ಸಚಿನ್ ಹೇಳಿಕೊಂಡಿದ್ದಾರೆ. ಸಚಿನ್ ತೆಂಡೂಲ್ಕರ್ ಸುದೀರ್ಘ ಅವಧಿಯಲ್ಲಿ ಕ್ರಿಕೆಟ್ ಆಡಿದ್ದು, ಆಗಿನ ನೋವುಗಳು ಈಗ ತೊಂದರೆ ಕೊಡುತ್ತಿವೆ ಎನ್ನಲಾಗಿದೆ. ಹಾಗಾಗಿ ಅವರು ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡಿದ್ದಾರೆ.

ಸಚಿನ್ ತೆಂಡೂಲ್ಕರ್ ಫೇಸ್ ಬುಕ್ ನಲ್ಲಿ ತಮ್ಮ ಎಡಗಾಲಿಗೆ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡಿರುವ ಫೋಟೋ ಅಪ್ ಲೋಡ್ ಮಾಡಿದ್ದು, ಇದಕ್ಕೆ ಸುಮಾರು 35 ಸಾವಿರ ಮಂದಿ ಪ್ರತಿಕ್ರಿಯೆ ನೀಡಿದ್ದಾರೆ. ಕೆಲವರು ಆತಂಕ ವ್ಯಕ್ತಪಡಿಸಿದ್ದರೆ, ಮತ್ತೆ ಕೆಲವರು ಸಿಂಪಥಿ ತೋರಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...