alex Certify
ಕನ್ನಡ ದುನಿಯಾ       Mobile App
       

Kannada Duniya

ಫಿಟ್ ಇಲ್ಲದೆ ಕಣಕ್ಕಿಳಿದೆ: ಸೈನಾ ನೆಹ್ವಾಲ್

saina

ಮುಂಬೈ: ನಾನು ಸಂಪೂರ್ಣ ಫಿಟ್ ಆಗದೇ ಹಾಂಕಾಂಗ್ ಮತ್ತು ಮಕಾವ್ ಓಪನ್ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಿದ್ದೆ ಎಂದು ಭಾರತದ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಹೇಳಿದ್ದಾರೆ.

ರಿಯೋ ಡಿ ಜನೈರೋದಲ್ಲಿ ನಡೆದ ಒಲಿಂಪಿಕ್ಸ್ ಬಳಿಕ, ಮೊಣಕಾಲಿನ ಶಸ್ತ್ರ ಚಿಕಿತ್ಸೆಗೆ ಒಳಗಾದೆ. ನಂತರದಲ್ಲಿ ನಾನು ಸಂಪೂರ್ಣ ಫಿಟ್ ಆಗಿರಲಿಲ್ಲವಾದರೂ, ಮಕಾವ್ ಮತ್ತು ಹಾಂಕಾಂಗ್ ಟೂರ್ನಿಯಲ್ಲಿ ಪಾಲ್ಗೊಂಡಿದ್ದೆ. ಟೂರ್ನಿಯಲ್ಲಿ ಅಗ್ರ ಶ್ರೇಯಾಂಕದ ಆಟಗಾರ್ತಿಯರೊಂದಿಗೆ ಆಟವಾಡಿದ್ದರಿಂದ ನನ್ನ ಫಿಟ್ ನೆಸ್ ಬಗ್ಗೆ ತಿಳಿದುಕೊಳ್ಳಲು ಸಾಧ್ಯವಾಯಿತು ಎಂದು ತಿಳಿಸಿದ್ದಾರೆ.

ಕೋಚ್ ವಿಮಲ್ ಕುಮಾರ್, ಮಕಾವ್ ಮತ್ತು ಹಾಂಕಾಂಗ್ ಓಪನ್ ಟೂರ್ನಿಯಲ್ಲಿ ಪಾಲ್ಗೊಳ್ಳುವುದು ಬೇಡ ಎಂದಿದ್ದರಾದರೂ, ನಾನು ಎರಡೂ ಟೂರ್ನಿಗಳಲ್ಲಿ ಪಾಲ್ಗೊಂಡು ಕ್ವಾರ್ಟರ್ ಫೈನಲ್ ಹಂತ ತಲುಪಿದ್ದೆ. ನಾನೀಗ ಚೇತರಿಸಿಕೊಳ್ಳುತ್ತಿದ್ದೇನೆ. ಮುಂದಿನ ಟೂರ್ನಿಗಳಲ್ಲಿ ಯಶಸ್ಸು ಗಳಿಸುವ ನಿಟ್ಟಿನಲ್ಲಿ ಗಮನ ಹರಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...