alex Certify
ಕನ್ನಡ ದುನಿಯಾ       Mobile App
       

Kannada Duniya

ಸಾನಿಯಾ- ಬೋಪಣ್ಣ ಜೋಡಿ ಸೆಮಿ ಫೈನಲ್ ಗೆ ಎಂಟ್ರಿ

sania rohan

ರಿಯೋ ಡಿ ಜನೈರೋ: ಬ್ರೆಜಿಲ್ ನ ರಿಯೋ ಡಿ ಜನೈರೋದಲ್ಲಿ ನಡೆಯುತ್ತಿರುವ, ಜಾಗತಿಕ ಕ್ರೀಡಾ ಹಬ್ಬ ಒಲಿಂಪಿಕ್ಸ್ ನಲ್ಲಿ, ಭಾರತದ ಕ್ರೀಡಾಪಟುಗಳು ಪದಕ ಗೆಲ್ಲುವತ್ತ ಕಠಿಣ ಶ್ರಮ ಹಾಕಿದ್ದಾರೆ. ಇದುವರೆಗೂ ಒಂದು ಪದಕ ಬಂದಿಲ್ಲವಾದರೂ, ಕೆಲವರು ಪದಕ ಗಳಿಸುವ ನಿರೀಕ್ಷೆ ಮೂಡಿಸಿದ್ದಾರೆ.

ಟೆನಿಸ್ ಮಿಶ್ರ ಡಬಲ್ಸ್ ನಲ್ಲಿ ಭಾರತದ ಸಾನಿಯಾ ಮಿರ್ಜಾ ಹಾಗೂ ರೋಹನ್ ಬೋಪಣ್ಣ ಜೋಡಿ, ಕ್ವಾರ್ಟರ್ ಫೈನಲ್ ನಲ್ಲಿ ಭರ್ಜರಿ ಜಯದೊಂದಿಗೆ ಸೆಮಿಫೈನಲ್ ಗೆ ಎಂಟ್ರಿ ಕೊಟ್ಟಿದೆ. ಸಾನಿಯಾ ಹಾಗೂ ಬೋಪಣ್ಣ ಜೋಡಿ ಬ್ರಿಟನ್ ಆಟಗಾರರಾದ ಮರ್ರೆ ಮತ್ತು ವಾಟ್ಸನ್ ಅವರನ್ನು 6-4, 6-4 ನೇರ ಸೆಟ್ ಗಳಿಂದ ಮಣಿಸಿದ್ದಾರೆ. ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಗೆಲುವು ಸಾಧಿಸಿ ಸೆಮಿ ಫೈನಲ್ ಗೆ ಪ್ರವೇಶಿಸುವ ಮೂಲಕ, ಪದಕ ಗಳಿಸುವ ನಿರೀಕ್ಷೆ ಮೂಡಿಸಿದ್ದಾರೆ.

ಭಾರಿ ಕುತೂಹಲ ಮೂಡಿಸಿದ್ದ ಟೆನಿಸ್ ಮಿಶ್ರ ಡಬಲ್ಸ್ ನ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಸಾನಿಯಾ ಹಾಗೂ ರೋಹನ್ ಬೋಪಣ್ಣ ಜೋಡಿ ಬ್ರಿಟನ್ ಜೋಡಿ ವಿರುದ್ಧ 6-4, 6-4 ಜಯದೊಂದಿಗೆ ಸೆಮಿಫೈನಲ್ ಪ್ರವೇಶಿಸಿದ್ದು, ನಿರೀಕ್ಷೆ ಮೂಡಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...