alex Certify
ಕನ್ನಡ ದುನಿಯಾ       Mobile App
       

Kannada Duniya

ಭಾರತಕ್ಕೆ ಭರ್ಜರಿ ಜಯ, ಕ್ವಾರ್ಟರ್ ಫೈನಲ್ ಗೆ ಎಂಟ್ರಿ

sania

ರಿಯೋ ಡಿ ಜನೈರೋ: ಒಲಿಂಪಿಕ್ಸ್ ನಲ್ಲಿ ಭಾರತದ ಸ್ಪರ್ಧಿಗಳು ಪದಕಕ್ಕಾಗಿ ವೀರೋಚಿತ ಆಟವಾಡುತ್ತಿದ್ದರೂ ಇದುವರೆಗೂ ಒಂದೂ ಪದಕ ಬಂದಿಲ್ಲ. ಕೆಲವು ವಿಭಾಗದ ಸ್ಪರ್ಧೆಗಳಲ್ಲಿ ಪದಕ ಗೆಲ್ಲಬಹುದಾದ ನಿರೀಕ್ಷೆ ಇದೆ.

ಟೆನಿಸ್ ಮಿಶ್ರ ಡಬಲ್ಸ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಭರ್ಜರಿ ಜಯಗಳಿಸಿದೆ. ಭಾರತದ ಭರವಸೆಯ ಆಟಗಾರರಾದ ಸಾನಿಯಾ ಮಿರ್ಜಾ ಮತ್ತು ರೋಹನ್ ಬೋಪಣ್ಣ, ಮಿಶ್ರ ಡಬಲ್ಸ್ ನಲ್ಲಿ 7-5, 6-4 ನೇರ ಸೆಟ್ ಗಳಿಂದ ಆಸ್ಟ್ರೇಲಿಯಾ ಆಟಗಾರರಾದ ಸ್ಟೋಸರ್ಸ್ ಹಾಗೂ ಪೀರ್ಸ್ ಅವರನ್ನು ಸೋಲಿಸಿದ್ದಾರೆ. ಇದರೊಂದಿಗೆ ಸಾನಿಯಾ ಮಿರ್ಜಾ ಹಾಗೂ ರೋಹನ್ ಬೋಪಣ್ಣ ಜೋಡಿ ಕ್ವಾರ್ಟರ್ ಫೈನಲ್ ಗೆ ಎಂಟ್ರಿ ಕೊಟ್ಟಿದೆ. ಈ ವಿಭಾಗದಲ್ಲಿ ಪದಕದ ನಿರೀಕ್ಷೆ ಹೆಚ್ಚಿದೆ.

ಭಾರೀ ಕುತೂಹಲದಿಂದ ಕೂಡಿದ್ದ ಮಿಶ್ರ ಡಬಲ್ಸ್ ಟೆನಿಸ್ ಪಂದ್ಯದಲ್ಲಿ ಸಾನಿಯಾ ಮಿರ್ಜಾ ಹಾಗೂ ರೋಹನ್ ಬೋಪಣ್ಣ ಅವರು ನಿರೀಕ್ಷೆಗೆ ತಕ್ಕಂತೆ ಆಟವಾಡಿ 7-5, 6-4 ನೇರ ಸೆಟ್ ಗಳಿಂದ ಆಸೀಸ್ ಆಟಗಾರರನ್ನು ಮಣಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...