alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಹಿದ್ ಅಫ್ರಿದಿ ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್

Shahid-Afridi 21

ಕರಾಚಿ: ಐಸಿಸಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಕೋಲ್ಕತಾದಲ್ಲಿ ನಡೆದ ಪಂದ್ಯದಲ್ಲಿ, ಶಾಹಿದ್ ಅಫ್ರಿದಿ ನಾಯಕತ್ವದ ಪಾಕಿಸ್ತಾನ ತಂಡ, ಭಾರತದ ವಿರುದ್ಧ ಸೋತಿರುವುದಕ್ಕೆ ಪಾಕ್ ಅಭಿಮಾನಿಗಳು, ಹೇಗೆಲ್ಲಾ ಆಕ್ರೋಶ ವ್ಯಕ್ತಪಡಿಸಿದ್ದರು ಎಂಬುದನ್ನು ನೋಡಿರುತ್ತೀರಿ.

ಪಾಕ್ ಅಭಿಮಾನಿಗಳು ಮಾತ್ರವಲ್ಲದೇ, ಮಾಜಿ ಆಟಗಾರರು ಕೂಡ ಕಿಡಿ ಕಾರಿದ್ದರು. ಈ ಎಲ್ಲಾ ಬೆಳವಣಿಗೆಗಳ ಬಳಿಕ ಅಫ್ರಿದಿ ತಲೆದಂಡ ಪಡೆಯಲು ನಿರ್ಧರಿಸಲಾಗಿದೆ. ಶಾಹಿದ್ ಆಫ್ರಿದಿ ಅವರನ್ನು ನಾಯಕತ್ವದಿಂದ ಬದಲಿಸಲು ತೀರ್ಮಾನಿಸಲಾಗಿದ್ದು, ವಿಶ್ವಕಪ್ ಟಿ-20 ಪಂದ್ಯಾವಳಿ ಮುಗಿದ ನಂತರ ಅಫ್ರಿದಿ ಸ್ಥಾನಕ್ಕೆ ಬೇರೊಬ್ಬರನ್ನು ನೇಮಿಸಲಾಗುವುದು ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಧ್ಯಕ್ಷ ಶಹರ್ಯಾರ್ ಖಾನ್ ತಿಳಿಸಿದ್ದಾರೆ.

ಪಂದ್ಯಾವಳಿಯಲ್ಲಿ ಆಟವಾಡಲು ಅಫ್ರಿದಿ ಭಾರತಕ್ಕೆ ಬಂದ ಸಂದರ್ಭದಲ್ಲಿ, ಭಾರತದಲ್ಲಿ ಪಾಕ್ ಗಿಂತ ಹೆಚ್ಚಿನ ಪ್ರೀತಿ, ಪ್ರೋತ್ಸಾಹ ಸಿಗುತ್ತದೆ ಎಂದು ಹೇಳಿದ್ದಕ್ಕೆ ಕೆಲವು ಹಿರಿಯ ಆಟಗಾರರು, ಅಸಮಾಧಾನ ವ್ಯಕ್ತಪಡಿಸಿದ್ದರು. ಅದರ ಬೆನ್ನಲ್ಲೇ ನಡೆದ ಪಂದ್ಯದಲ್ಲಿ ಭಾರತ ವಿರುದ್ಧ ಸೋತಿದ್ದರಿಂದ ಪಾಕ್ ಟಿ-20 ಕ್ರಿಕೆಟ್ ತಂಡದ ನಾಯಕನ ಸ್ಥಾನಕ್ಕೆ ಅಫ್ರಿದಿ ಬದಲು ಬೇರೆಯವರನ್ನು ನಿಯೋಜಿಸಲಾಗುತ್ತಿದೆ.

ಈ ವಿಶ್ವಕಪ್ ಪಂದ್ಯಾವಳಿ ಮುಗಿದ ನಂತರ, ಅಂತರರಾಷ್ಟ್ರೀಯ ಕ್ರಿಕೆಟ್ ನಿಂದ ನಿವೃತ್ತಿಯಾಗುವುದಾಗಿ ಅಫ್ರಿದಿ ಹೇಳಿದ್ದಾರೆ. ಆದರೆ, ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಫ್ರಿದಿ ನಿವೃತ್ತರಾಗದಿದ್ದರೂ ನಾಯಕತ್ವ ಸ್ಥಾನದಿಂದ ಇಳಿಸುವುದಾಗಿ ತಿಳಿಸಿದೆ. ಅಲ್ಲದೇ, ತಂಡದಲ್ಲಿ ಅವರನ್ನು ಮುಂದುವರೆಸುವ ಬಗ್ಗೆ ಮುಂದೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪಿಸಿಸಿ ಅಧ್ಯಕ್ಷ ಶಹರ್ಯಾರ್ ಖಾನ್ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...