alex Certify
ಕನ್ನಡ ದುನಿಯಾ       Mobile App
       

Kannada Duniya

ಮತ್ತೊಂದು ವಿವಾದ ಸೃಷ್ಟಿಸಿದ ಶಾಹಿದ್‌ ಆಫ್ರಿದಿ

sahid-story_647_032316103623

ಪಾಕ್ ಗಿಂತ ಭಾರತದಲ್ಲಿಯೇ ನಮ್ಮನ್ನು ಹೆಚ್ಚು ಪ್ರೀತಿಸುತ್ತಾರೆ ಎನ್ನುವ ಮೂಲಕ ಪಾಕ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಕ್ರಿಕೆಟಿಗ ಶಾಹಿದ್‌ ಆಫ್ರಿದಿ, ಇದೀಗ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಸುದ್ದಿಯಾಗಿದ್ದಾರೆ.

ಹೌದು. ಮಂಗಳವಾರ ಮೊಹಾಲಿಯಲ್ಲಿ ನಡೆದ ಪಾಕಿಸ್ತಾನ ಹಾಗೂ ನ್ಯೂಜಿಲ್ಯಾಂಡ್‌ ನಡುವಣ ನಡೆಯುವ ಪಂದ್ಯದ ನಂತರ ನಿಮಗೆ ಇಲ್ಲಿ ಬಹಳಷ್ಟು ಅಭಿಮಾನಿಗಳು ಇದ್ದಂತಿದೆ ಎಂದು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಆಫ್ರಿದಿ, ಕಾಶ್ಮೀರದಿಂದ ಹೆಚ್ಚಿನ ಸಂಖ್ಯೆಯಲ್ಲಿ ಕ್ರಿಕೆಟ್ ಅಭಿಮಾನಿಗಳು ಪಾಕ್ ತಂಡವನ್ನು ಬೆಂಬಲಿಸಲು ಬಂದಿದ್ದರು ಎನ್ನುವ ಮೂಲಕ ಭಾರತೀಯರ ಆಕ್ರೋಶಕ್ಕೆ ಕಾರಣರಾಗಿದ್ದಾರೆ.

ಪಾಕಿಸ್ತಾನ ಹಾಗೂ ನ್ಯೂಜಿಲ್ಯಾಂಡ್‌ ನಡುವಣ ಪಂದ್ಯದಲ್ಲಿ ಟಾಸ್‌ ನಡೆಯುತ್ತಿದ್ದ ವೇಳೆ ಕ್ರೀಡಾಂಗಣದಲ್ಲಿದ್ದ ಬಹಳಷ್ಟು ಅಭಿಮಾನಿಗಳು ಆಫ್ರಿದಿ ಪರ ಜಯಕಾರ ಹಾಕಿದ್ದರು. ಈ ಸಂದರ್ಭದಲ್ಲಿ ಪಾಕಿಸ್ತಾನದ ಕಮೆಂಟರ್‌, ಆಫ್ರಿದಿಯನ್ನು ಉದ್ದೇಶಿಸಿ ನಿಮಗೆ ಇಲ್ಲಿ ಬಹಳಷ್ಟು ಅಭಿಮಾನಿಗಳು ಇದ್ದಂತಿದೆ ಎಂದಿದ್ದು, ಇದಕ್ಕೆ ಅಫ್ರಿದಿ ‘ಅವರೆಲ್ಲ ಕಾಶ್ಮೀರದಿಂದ ಬಂದಿರುವ ಪಾಕ್ ಅಭಿಮಾನಿಗಳು’ ಎನ್ನುವ ಮೂಲಕ ಚರ್ಚೆಗೆ ಗ್ರಾಸರಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...