alex Certify
ಕನ್ನಡ ದುನಿಯಾ       Mobile App
       

Kannada Duniya

ಕ್ರಿಕೆಟರ್ ಶೇನ್ ವಾಟ್ಸನ್ ಅಭಿಮಾನಿಗಳಿಗೊಂದು ಬೇಸರದ ಸುದ್ದಿ

shane vats

ಮೊಹಾಲಿ: ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಪ್ರತಿಭಾನ್ವಿತ ಆಟಗಾರ ಶೇನ್ ವಾಟ್ಸನ್ ಅಭಿಮಾನಿಗಳಿಗೆ ಬೇಸರ ತರುವ ಸುದ್ದಿಯೊಂದು ಇಲ್ಲಿದೆ. ಶೇನ್ ವಾಟ್ಸನ್ ವಿಶ್ವಕಪ್ ಟಿ-20 ಕ್ರಿಕೆಟ್ ಪಂದ್ಯಾವಳಿ ನಂತರ ಅಂತರರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಲಿದ್ದಾರೆ.

ಭಾರತದಲ್ಲಿ ನಡೆಯುತ್ತಿರುವ ಐಸಿಸಿ ವಿಶ್ವಕಪ್ ಟಿ-20 ಪಂದ್ಯಾವಳಿಯಲ್ಲಿ ಶೇನ್ ವಾಟ್ಸನ್ ಪಾಲ್ಗೊಂಡಿದ್ದು, ಆಸ್ಟ್ರೇಲಿಯಾ ತಂಡದ ಪರವಾಗಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಬೌಲಿಂಗ್ ಹಾಗೂ ಬ್ಯಾಟಿಂಗ್ ನಲ್ಲಿ ಅಮೋಘ ಪ್ರದರ್ಶನ ನೀಡುವ ಶೇನ್ ವಾಟ್ಸನ್ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಆಧಾರ ಸ್ತಂಭದಂತೆ ಇದ್ದಾರೆ. ಈಗಾಗಲೇ ಅಂತರರಾಷ್ಟ್ರೀಯ ಟೆಸ್ಟ್ ಕ್ರಿಕೆಟ್ ಗೆ ವಿದಾಯ ಹೇಳಿರುವ ಶೇನ್ ವಾಟ್ಸನ್, ಅಂತರರಾಷ್ಟ್ರೀಯ ಏಕದಿನ ಹಾಗೂ ಟಿ-20 ಕ್ರಿಕೆಟ್ ನಿಂದಲೂ ನಿವೃತ್ತರಾಗಲಿದ್ದಾರೆ.

ಶೇನ್ ವಾಟ್ಸನ್ ಅಂತರರಾಷ್ಟ್ರೀಯ ಮಟ್ಟದಲ್ಲಿ 190 ಏಕದಿನ ಪಂದ್ಯಗಳಲ್ಲಿ ಆಟವಾಡಿದ್ದಾರೆ. 59 ಟೆಸ್ಟ್ ಕ್ರಿಕೆಟ್ ಪಂದ್ಯಗಳು ಹಾಗೂ 52 ಟಿ-20 ಪಂದ್ಯಗಳನ್ನಾಡಿದ್ದು, 137 ಮೊದಲ ದರ್ಜೆಯ ಪಂದ್ಯಗಳಲ್ಲಿ ಮಿಂಚಿದ್ದಾರೆ. ಕ್ರಿಕೆಟ್ ನಲ್ಲಿ ಅವರು ಹಲವು ದಾಖಲೆಗಳನ್ನು ಮಾಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...