alex Certify
ಕನ್ನಡ ದುನಿಯಾ       Mobile App
       

Kannada Duniya

ಪಂದ್ಯ ನಡೆಯುತ್ತಿರುವಾಗಲೇ ಮೈದಾನದೊಳಗೆ ಬಂದು ಬಿತ್ತು ಚಪ್ಪಲಿ

ಕಾವೇರಿ ನಿರ್ವಹಣಾ ಮಂಡಳಿ ರಚಿಸುವಂತೆ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿ ತಮಿಳುನಾಡಿನ ಕೆಲ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆಯ ಬಿಸಿ ಐಪಿಎಲ್ ಪಂದ್ಯಾವಳಿಗೂ ತಟ್ಟಿದ್ದು, ಮಂಗಳವಾರದಂದು ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ಪಂದ್ಯದ ವೇಳೆ ಮೈದಾನದೊಳಕ್ಕೆ ಚಪ್ಪಲಿ ಎಸೆದ ಘಟನೆ ನಡೆದಿದೆ.

ಕೋಲ್ಕತ್ತಾ ನೈಟ್ ರೈಡರ್ಸ್ ಬ್ಯಾಟಿಂಗ್ ಮಾಡುತ್ತಿದ್ದಾಗ ಎಂಟನೇ ಓವರ್ ನಲ್ಲಿ ಲಾಂಗ್ ಆನ್ ನಲ್ಲಿ ಫಿಲ್ಡಿಂಗ್ ಮಾಡುತ್ತಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ರವೀಂದ್ರ ಜಡೇಜಾರ ಬಳಿ ಚಪ್ಪಲಿ ಹಾರಿ ಬಂದಿದ್ದು, ಕೂಡಲೇ ಅದನ್ನು ತೆಗೆಯಲಾಗಿದೆ. ತಮಿಳುನಾಡಿನ ಜನತೆ ಗಮನ ಬೇರೆಡೆ ಸೆಳೆಯಲೆಂದೇ ಐಪಿಎಲ್ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಆರೋಪಿಸಿದ್ದ ಪ್ರತಿಭಟನಾಕಾರರು ಪಂದ್ಯಾವಳಿಯನ್ನು ರದ್ದುಗೊಳಿಸುವಂತೆ ಆಗ್ರಹಿಸಿದ್ದರು.

ಈ ಹಿನ್ನಲೆಯಲ್ಲಿ ಮಂಗಳವಾರ ನಡೆದ ಪಂದ್ಯಾವಳಿಗೆ ಬಿಗಿ ಭದ್ರತೆಯನ್ನು ಒದಗಿಸಲಾಗಿದ್ದು, ನಾಲ್ಕು ಸಾವಿರಕ್ಕೂ ಅಧಿಕ ಮಂದಿ ಪೊಲೀಸರನ್ನು ನಿಯೋಜಿಸಲಾಗಿತ್ತು. ಚೆನ್ನೈನ ಹಲವೆಡೆ ಪ್ರತಿಭಟನಾಕಾರರು ಕಾವೇರಿ ನಿರ್ವಹಣಾ ಪ್ರಾಧಿಕಾರ ರಚಿಸುವಂತೆ ಆಗ್ರಹಿಸಿ ರಸ್ತೆ ತಡೆ ನಡೆಸಿದ್ದು, ಇದರಿಂದಾಗಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಐಪಿಎಲ್ ಪಂದ್ಯಾವಳಿ ನಡೆಯುತ್ತಿದ್ದ ಎಂ.ಎ. ಚಿದಂಬರಂ ಮೈದಾನದ ಬಳಿಯೂ ಕೆಲವರು ಪ್ರತಿಭಟನೆ ನಡೆಸಿದ್ದರು. ಇದರ ನಡುವೆ ಮೈದಾನದೊಳಗೆ ನುಸುಳಿದ ಇಬ್ಬರು ಚಪ್ಪಲಿ ಎಸೆದಿದ್ದು, ಬಳಿಕ ಪೊಲೀಸರು ಅವರುಗಳನ್ನು ವಶಕ್ಕೆ ಪಡೆದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...