alex Certify
ಕನ್ನಡ ದುನಿಯಾ       Mobile App
       

Kannada Duniya

ಏಕದಿನ ಕ್ರಿಕೆಟ್ ನಲ್ಲಿ ಮತ್ತೊಂದು ದಾಖಲೆ ಬರೆದ ಗೇಲ್

ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡದ ಸ್ಫೋಟಕ ಬ್ಯಾಟ್ಸ್ ಮನ್ ಕ್ರಿಸ್ ಗೇಲ್ ಏಕದಿನ ಕ್ರಿಕೆಟ್ ನಲ್ಲಿ ಹೊಸ ದಾಖಲೆ ಬರೆದಿದ್ದಾರೆ. ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ ಅತಿ ಹೆಚ್ಚು ಸಿಕ್ಸರ್ ಹೊಡೆದ ಪಾಕ್ ಆಲ್ ರೌಂಡರ್ ಶಾಹೀದ್ ಅಫ್ರಿದಿ ನಂತರದ ಸ್ಥಾನ ಪಡೆದಿದ್ದಾರೆ.

ಬಾಂಗ್ಲಾದೇಶ ವಿರುದ್ಧದ ಏಕದಿನ ಪಂದ್ಯದಲ್ಲಿ ಗೇಲ್ 5 ಸಿಕ್ಸರ್ ಸಿಡಿಸಿ ಏಕದಿನ ಕ್ರಿಕೆಟ್ ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ವಿಶ್ವದ 2ನೇ ಆಟಗಾರ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ.

ಕ್ರಿಸ್ ಗೇಲ್ 66 ಎಸೆತಗಳಲ್ಲಿ 5 ಸಿಕ್ಸರ್ ಸಿಡಿಸಿದ್ದಾರೆ. ಈ ಪಂದ್ಯಕ್ಕೂ ಮುನ್ನ ಗೇಲ್ 270 ಸಿಕ್ಸರ್ ಸಿಡಿಸಿ ಗರಿಷ್ಠ ಸಿಕ್ಸರ್ ಸಿಡಿಸಿದ ಸಾಲಿನಲ್ಲಿ 3 ನೇ ಸ್ಥಾನದಲ್ಲಿದ್ದರು. ಇದೀಗ ಗೇಲ್ ಎರಡನೆ ಸ್ಥಾನ ಪಡೆದುಕೊಂಡಿದ್ದಾರೆ.

ಈಗ ಗೇಲ್ ಖಾತೆಗೆ 275 ಸಿಕ್ಸರ್ ಗಳು ಸೇರಿದ್ದು, ಶ್ರೀಲಂಕಾ ತಂಡದ ಮಾಜಿ ಆಟಗಾರ ಸನತ್ ಜಯಸೂರ್ಯ(270 ಸಿಕ್ಸರ್) ಅವರನ್ನು ಹಿಂದಿಕ್ಕಿ ಏಕದಿನ ಕ್ರಿಕೆಟ್ ಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದ್ದಾರೆ. ಪಾಕಿಸ್ತಾನದ ಶಾಹೀದ್ ಆಫ್ರಿದಿ 351 ಸಿಕ್ಸರ್ ಸಿಡಿಸಿ ಮೊದಲನೇ ಸ್ಥಾನ ಅಲಂಕರಿಸಿದ್ದರೆ, ನಾಲ್ಕನೇ ಸ್ಥಾನದಲ್ಲಿ ಭಾರತ ತಂಡದ ಮಾಜಿ ನಾಯಕ ಧೋನಿ (217) ಇದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...