alex Certify
ಕನ್ನಡ ದುನಿಯಾ       Mobile App
       

Kannada Duniya

ಸೌರವ್ ಗಂಗೂಲಿಗೆ ಜೀವ ಬೆದರಿಕೆ

dadaಕೋಲ್ಕತಾ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಬಂಗಾಳ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ಸೌರವ್ ಗಂಗೂಲಿ ಅವರಿಗೆ ದುಷ್ಕರ್ಮಿಗಳು ಜೀವ ಬೆದರಿಕೆ ಹಾಕಿದ್ದಾರೆ.

ಅಂಚೆ ಮೂಲಕ ಸೌರವ್ ತಾಯಿಯವರ ವಿಳಾಸಕ್ಕೆ ಪತ್ರ ಬರೆಯಲಾಗಿದೆ. ಅನಾಮಧೇಯರು ಬರೆದಿರುವ ಪತ್ರ ಜನವರಿ 5 ರಂದು ಸೌರವ್ ಗಂಗೂಲಿ ಅವರಿಗೆ ತಲುಪಿದೆ.

ಜನವರಿ 19 ರಂದು ಪಶ್ಚಿಮ ಬಂಗಾಳದ ಮಿಡ್ನಾಪುರ್ ಜಿಲ್ಲೆಯ ವಿದ್ಯಾಸಾಗರ್ ವಿಶ್ವವಿದ್ಯಾಲಯದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಬರಬೇಡಿ. ಬಂದರೆ ಗಂಭೀರ ಪರಿಣಾಮ ಎದುರಿಸುತ್ತೀರಿ ಎಂದು ಬೆದರಿಕೆ ಹಾಕಲಾಗಿದೆ.

ಸೌರವ್ ಗಂಗೂಲಿ ತಮಗೆ ಬಂದಿರುವ ಬೆದರಿಕೆ ಪತ್ರ ಕುರಿತಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...