alex Certify
ಕನ್ನಡ ದುನಿಯಾ       Mobile App
       

Kannada Duniya

ಆಟಗಾರರ ಖುಷಿ ಹೆಚ್ಚಿಸಿದ ಶ್ರೀಲಂಕಾ ಕ್ರಿಕೆಟ್ ಮಂಡಳಿ

ವಿಶ್ವದ ಅತ್ಯಂತ ಶ್ರೀಮಂತ ಕ್ರೀಡೆಗಳಲ್ಲಿ ಕ್ರಿಕೆಟ್ ಕೂಡ ಒಂದು. ಭಾರತದ ಬಿಸಿಸಿಐ ಅತಿ ಹೆಚ್ಚು ಆದಾಯವನ್ನು ಹೊಂದಿರುವ ಕ್ರಿಕೆಟ್ ಸಂಸ್ಥೆಯಾಗಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಆಟಗಾರರು ಭಾರಿ ವೇತನ ಪಡೆಯುತ್ತಿದ್ದಾರೆ.

ಇದೀಗ ಶ್ರೀಲಂಕಾ ಕ್ರಿಕೆಟ್ ಮಂಡಳಿ, ತನ್ನ ಆಟಗಾರರಿಗೆ ಶೇಕಡಾ 34ರಷ್ಟು ವೇತನವನ್ನು ಹೆಚ್ಚಳ ಮಾಡುವ ಮೂಲಕ ಅವರುಗಳ ಖುಷಿಯನ್ನು ಹೆಚ್ಚಿಸಿದೆ.

ಒಟ್ಟು 33 ಮಂದಿ ಆಟಗಾರರು ಶ್ರೀಲಂಕಾ ಕ್ರಿಕೆಟ್ ಸಂಸ್ಥೆಯ ಗುತ್ತಿಗೆ ಪಟ್ಟಿಯಲ್ಲಿದ್ದು, ಇವರುಗಳಿಗೆ ವೇತನ ಮಾತ್ರವಲ್ಲದೆ ಪಂದ್ಯದ ಶುಲ್ಕವನ್ನು ಸಹ ಹೆಚ್ಚಿಸಲಾಗಿದೆ.

ಶ್ರೀಲಂಕಾ ಕ್ರಿಕೆಟ್ ಸಂಸ್ಥೆಗೆ ಕಳೆದ ವರ್ಷ ಉತ್ತಮ ಲಾಭ ಬಂದಿರುವ ಕಾರಣ ಆಟಗಾರರಿಗೆ ವೇತನ ಹೆಚ್ಚಳ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಭಾರತ ಪ್ರವಾಸದ ನೇರಪ್ರಸಾರದಿಂದಲೇ ಶ್ರೀಲಂಕಾ ಕ್ರಿಕೆಟ್ ಸಂಸ್ಥೆಗೆ ಸಾಕಷ್ಟು ಆದಾಯ ಹರಿದು ಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...