alex Certify
ಕನ್ನಡ ದುನಿಯಾ       Mobile App
       

Kannada Duniya

ಸರಣಿ ಕ್ಲೀನ್ ಸ್ವೀಪ್ ಗೆ ಕೊಹ್ಲಿ ಬಳಗ ರೆಡಿ

test-criket

ಕ್ಯಾಂಡಿ: ಭಾರತ ಮತ್ತು ಶ್ರೀಲಂಕಾ ನಡುವೆ 3 ನೇ ಹಾಗೂ ಅಂತಿಮ ಟೆಸ್ಟ್ ಕ್ರಿಕೆಟ್ ಪಂದ್ಯ ಕ್ಯಾಂಡಿಯ ಪಲ್ಲೆಕೆಲೆ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಇಂದಿನಿಂದ ಆರಂಭವಾಗಲಿದೆ.

ಈಗಾಗಲೇ 3 ಪಂದ್ಯಗಳ ಈ ಟೆಸ್ಟ್ ಸರಣಿಯನ್ನು 2 -0 ಅಂತರದಿಂದ ಜಯಿಸಿರುವ ಟೀಂ ಇಂಡಿಯಾ ಸರಣಿ ಕ್ಲೀನ್ ಸ್ವೀಪ್ ಗುರಿಯೊಂದಿಗೆ ಕಣಕ್ಕಿಳಿಯಲಿದೆ.

ಈ ಪಂದ್ಯವನ್ನು ಜಯಿಸಿದಲ್ಲಿ ಭಾರತ ದಾಖಲೆ ಬರೆಯಲಿದೆ. 1968 ರ ಬಳಿಕ ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ಸರಣಿ ಗೆದ್ದ ದಾಖಲೆಗೆ ಪಾತ್ರವಾಗಲಿದೆ. 2004 ರಲ್ಲಿ ಆಸ್ಟ್ರೇಲಿಯಾ 3 ಪಂದ್ಯಗಳ ಟೆಸ್ಟ್ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿತ್ತು. ಈಗ ಟೀಂ ಇಂಡಿಯಾ ದಾಖಲೆ ಬರೆಯಲು ಸಜ್ಜಾಗಿದೆ.

ಮೊದಲ ಮತ್ತು 2 ನೇ ಟೆಸ್ಟ್ ಪಂದ್ಯಗಳ ಸೋಲಿನಿಂದ ಕಂಗೆಟ್ಟಿರುವ ಶ್ರೀಲಂಕಾ 3 ನೇ ಪಂದ್ಯವನ್ನು ಗೆಲ್ಲಲು ಕಾರ್ಯತಂತ್ರ ರೂಪಿಸಿದೆ.

ರಂಗನಾ ಹೆರಾತ್, ನುವಾನ್ ಪ್ರದೀಪ್, ಅಸೆಲಾ ಗುಣರತ್ನೆ ತಂಡದಿಂದ ಹೊರಗುಳಿದಿರುವುದು ಹಿನ್ನಡೆಯಾಗಿದೆ. ಇನ್ನು ಟೀಂ ಇಂಡಿಯಾದಲ್ಲಿ ವಿರಾಟ್ ಕೊಹ್ಲಿ, ಶಿಖರ್ ಧವನ್, ಕೆ.ಎಲ್. ರಾಹುಲ್, ಅಜಿಂಕ್ಯಾ ರೆಹಾನೆ, ಚೇತೇಶ್ವರ ಪೂಜಾರ ಉತ್ತಮ ಫಾರ್ಮ್ ನಲ್ಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರ ಹೊಸ ಪಕ್ಷ ಸ್ಥಾಪಿಸಿದರೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...