alex Certify
ಕನ್ನಡ ದುನಿಯಾ       Mobile App
       

Kannada Duniya

ಪಾಕಿಸ್ತಾನದಲ್ಲಿ ಆಡಲು ನಿರಾಕರಿಸಿದ ಲಂಕಾ

lanka-dd

ಕರಾಚಿ: ಪಾಕಿಸ್ತಾನ ಮತ್ತು ಶ್ರೀಲಂಕಾ ತಂಡಗಳ ನಡುವೆ ಅಕ್ಟೋಬರ್ ನಲ್ಲಿ ನಡೆಯಬೇಕಿದ್ದ, ಟಿ -20 ಸರಣಿಯ ಮೊದಲ ಪಂದ್ಯ ಪಾಕ್ ನಲ್ಲಿ ನಡೆಯಬೇಕಿತ್ತು.

ಉಳಿದ ಪಂದ್ಯಗಳನ್ನು ಯು.ಎ.ಇ.ನಲ್ಲಿ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ, ಪಾಕಿಸ್ತಾನದಲ್ಲಿ ಕ್ರಿಕೆಟ್ ಆಡಲು ಶ್ರೀಲಂಕಾ ನಿರಾಕರಿಸಿದೆ.

ಪಾಕ್ ನಲ್ಲಿ ಮೊದಲ ಪಂದ್ಯವನ್ನಾಡಲು ತಂಡವನ್ನು ಕಳುಹಿಸುವುದಿಲ್ಲ ಎಂದು ಶ್ರೀಲಂಕಾ ಕ್ರಿಕೆಟ್ ಮಂಡಳಿ ಹೇಳಿದೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಧ್ಯಕ್ಷ ಶಹರಿಯಾರ್ ಖಾನ್ ಈ ಕುರಿತು ಮಾಹಿತಿ ನೀಡಿದ್ದು, ವರ್ಷಾರಂಭದಲ್ಲಿ ಆತ್ಮಹತ್ಯಾ ದಾಳಿ ನಡೆದ ಬಳಿಕ, ಶ್ರೀಲಂಕಾ ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.

ಈ ಹಿಂದೆ ಮೊದಲ ಟಿ -20 ಪಂದ್ಯವನ್ನಾಡಲು ಪಾಕಿಸ್ತಾನಕ್ಕೆ ತಂಡವನ್ನು ಕಳುಹಿಸುವುದಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿ ಅಧ್ಯಕ್ಷರು ತಿಳಿಸಿದ್ದರು. ಆದರೆ, ಈಗ ನಿರಾಕರಿಸಿದ್ದಾರೆ ಎಂದು ಶಹರಿಯಾರ್ ಖಾನ್ ಬೇಸರ ವ್ಯಕ್ತಪಡಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...