alex Certify
ಕನ್ನಡ ದುನಿಯಾ       Mobile App
       

Kannada Duniya

ಏಕದಿನ ಆಯ್ತು, ಟಿ -20 ಸರಣಿ ಮೇಲೆ ಕೊಹ್ಲಿ ಪಡೆ ಕಣ್ಣು

ಜೋಹಾನ್ಸ್ ಬರ್ಗ್: ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧ 5-1 ಅಂತರದಲ್ಲಿ ಏಕದಿನ ಸರಣಿಯನ್ನು ಜಯಿಸಿರುವ ಟೀಂ ಇಂಡಿಯಾ, ಫೆಬ್ರವರಿ 18 ರಿಂದ ಆರಂಭವಾಗಲಿರುವ ಟಿ-20 ಸರಣಿಯನ್ನು ಜಯಿಸುವ ವಿಶ್ವಾಸದಲ್ಲಿದೆ.

ಏಕದಿನ ಸರಣಿಯಲ್ಲಿ ಐತಿಹಾಸಿಕ ಜಯ ದಾಖಲಿಸಿದ ಕೊಹ್ಲಿ ಪಡೆ 3 ಪಂದ್ಯಗಳ ಟಿ-20 ಸರಣಿಯನ್ನು ಕ್ಲೀನ್ ಸ್ವೀಪ್ ಮಾಡುವ ವಿಶ್ವಾಸದಲ್ಲಿದೆ.

ಸುರೇಶ್ ರೈನಾ ತಂಡಕ್ಕೆ ಮರಳಿದ್ದಾರೆ. ಅವರೊಂದಿಗೆ ಕೆ.ಎಲ್. ರಾಹುಲ್ ಕೂಡ ತಂಡವನ್ನು ಸೇರಿಕೊಂಡಿದ್ದಾರೆ. ಏಕದಿನ ತಂಡದಲ್ಲಿದ್ದ ಬಹುತೇಕ ಆಟಗಾರರು ಟಿ-20 ತಂಡದಲ್ಲಿದ್ದಾರೆ. ಏಕದಿನ ಸರಣಿಯನ್ನು ಸೋತಿರುವ ದಕ್ಷಿಣ ಆಫ್ರಿಕಾ ಟಿ-20 ಸರಣಿಯನ್ನು ಜಯಿಸಲು ಕಾರ್ಯತಂತ್ರ ರೂಪಿಸಿದೆ.

ಜೋಹಾನ್ಸ್ ಬರ್ಗ್ ನ ದಿ ವಾಂಡರರ್ಸ್ ಸ್ಟೇಡಿಯಂನಲ್ಲಿ ಭಾರತೀಯ ಕಾಲಮಾನ ಭಾನುವಾರ ಸಂಜೆ 6 ಗಂಟೆಗೆ ಮೊದಲ ಟಿ -20 ಪಂದ್ಯ ಆರಂಭವಾಗಲಿದ್ದು, ಕುತೂಹಲ ಮೂಡಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...