alex Certify
ಕನ್ನಡ ದುನಿಯಾ       Mobile App
       

Kannada Duniya

ಬಾಂಗ್ಲಾ ವಿರುದ್ಧ ಗೆಲುವಿನ ನಗೆ ಬೀರಿದ ಕೊಹ್ಲಿ ಪಡೆ

ishant_49lvovq

ಹೈದರಾಬಾದ್ ನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾ ವಿರುದ್ಧ ಕೊಹ್ಲಿ ಪಡೆ ಗೆಲುವಿನ ನಗೆ ಬೀರಿದೆ. 208 ರನ್ ಗಳ ಅಂತರದಲ್ಲಿ ಟೀಂ ಇಂಡಿಯಾ ಜಯ ಸಾಧಿಸಿದೆ.

ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದ ಭಾರತ ಮೊದಲ ಇನ್ನಿಂಗ್ಸ್ ನಲ್ಲಿ 687 ರನ್ ಗಳಿಸಿತ್ತು. ಗುರಿ ಬೆನ್ನು ಹತ್ತಿದ ಬಾಂಗ್ಲಾದೇಶ 388 ರನ್ ಗಳಿಗೆ ಎಲ್ಲ ವಿಕೆಟ್ ಒಪ್ಪಿಸಿತ್ತು. 299 ರನ್ ಮುನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಶುರುಮಾಡಿದ ಇಂಡಿಯಾ 159 ರನ್ ಗಳಿಸಿ ಡಿಕ್ಲರ್ ಮಾಡಿಕೊಂಡಿತ್ತು. 459 ರನ್ ಗುರಿ ಬೆನ್ನುಹತ್ತಿದ ಬಾಂಗ್ಲಾ 250 ರನ್ ಗೆ ಆಲೌಟ್ ಆಗುವ ಜೊತೆಗೆ ಭಾರತಕ್ಕೆ ಶರಣಾಯ್ತು.

ಕೊಹ್ಲಿ ನಾಯಕತ್ವದಲ್ಲಿ ಟೀಂ ಇಂಡಿಯಾ ಸತತ 19 ಟೆಸ್ಟ್ ಗಳಲ್ಲಿ ಜಯಗಳಿಸಿದೆ. ಈ ಮೂಲಕ ಮಾಜಿ ನಾಯಕ ಸುನಿಲ್ ಗವಾಸ್ಕರ್ ದಾಖಲೆಯನ್ನು ವಿರಾಟ್ ಕೊಹ್ಲಿ ಮುರಿದಿದ್ದಾರೆ. ವಿಶ್ವಮಟ್ಟದಲ್ಲಿ ನೋಡೋದಾದ್ರೆ ವೆಸ್ಟ್ ಇಂಡೀಸ್ ಮೊದಲ ಸ್ಥಾನದಲ್ಲಿದೆ. ಇಂಗ್ಲೆಂಡ್ ಎರಡು ಹಾಗೂ ಆಸ್ಟ್ರೇಲಿಯಾ ಮೂರನೇ ಸ್ಥಾನದಲ್ಲಿದೆ. ವಿರಾಟ್ ಕೊಹ್ಲಿ 6 ಟೆಸ್ಟ್ ಸರಣಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...