alex Certify
ಕನ್ನಡ ದುನಿಯಾ       Mobile App
       

Kannada Duniya

ಸಾಮಾಜಿಕ ಜಾಲತಾಣದಲ್ಲಿ ಸಮಯ ವ್ಯರ್ಥ ಮಾಡಬೇಡಿ – ಕೊಹ್ಲಿ ಸಲಹೆ

ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅತ್ಯುತ್ತಮ ಪ್ರದರ್ಶನ ಹಾಗೂ ಫಿಟ್ನೆಸ್ ನಿಂದ ಅಭಿಮಾನಿಗಳ ಮನ ಗೆದ್ದಿದ್ದಾರೆ. ವಿಶ್ವದಾದ್ಯಂತ ಮಾನ್ಯತೆ ಪಡೆದಿರುವ ಟೀಂ ಇಂಡಿಯಾ ನಾಯಕ ದೇಶದ ಜನತೆಗೆ ಸಲಹೆಯೊಂದನ್ನು ನೀಡಿದ್ದಾರೆ. ಹೊರಾಂಗಣ ಕ್ರೀಡಾಕೂಟದಲ್ಲಿ ಹೆಚ್ಚಾಗಿ ಪಾಲ್ಗೊಳ್ಳಿ, ಸಾಮಾಜಿಕ ಜಾಲತಾಣದಲ್ಲಿ ಸಮಯ ವ್ಯರ್ಥ ಮಾಡಬೇಡಿ ಎಂದು ಕೊಹ್ಲಿ ಸಲಹೆ ನೀಡಿದ್ದಾರೆ.

ದೆಹಲಿಯಲ್ಲಿ ಲೈಫ್ ಸ್ಟೈಲ್ ಬ್ರ್ಯಾಂಡ್ ಒನ್ 8 ಬಿಡುಗಡೆ ಸಮಾರಂಭಕ್ಕೆ ಬಂದಿದ್ದ ಕೊಹ್ಲಿ ಈ ವಿಷ್ಯದ ಬಗ್ಗೆ ಮಾತನಾಡಿದ್ದಾರೆ. ಈಗಿನ ಮಕ್ಕಳು ಹೊರಗೆ ಆಟ ಆಡುವ ಬದಲು ವಿಡಿಯೋ ಗೇಮ್ ನಲ್ಲಿ ಕಾಲ ಕಳೆಯುತ್ತಾರೆ. ದೈಹಿಕ ಚಟುವಟಿಕೆ ಬಹಳ ಮಹತ್ವದ್ದು. ಹಾಗಾಗಿ ನನ್ನ ಸಂದೇಶ ಕೇವಲ ಯುವ ಜನತೆಗೆ ಮಾತ್ರವಲ್ಲ ದೇಶದ ಜನತೆಗೆ ಅನ್ವಯಿಸುತ್ತದೆ ಎಂದಿದ್ದಾರೆ.

ದೇಶದಲ್ಲಿ ಏನೆಲ್ಲ ಆಗ್ತಿದೆ ಎಂಬುದನ್ನು ತಿಳಿಯಲು ಕೆಲ ಸಮಯ ಸಾಮಾಜಿಕ ಜಾಲತಾಣದಲ್ಲಿ ಕಳೆಯಬೇಕು. ಆದ್ರೆ ಇಡೀ ದಿನ ಸಾಮಾಜಿಕ ಜಾಲತಾಣದಲ್ಲಿರುವುದು ಒಳ್ಳೆಯದಲ್ಲ ಎಂದು ಕೊಹ್ಲಿ ಹೇಳಿದ್ದಾರೆ. ಮೈದಾನದಲ್ಲಿ ಉತ್ತಮ ಪ್ರದರ್ಶನ ನೀಡುವ ಕೊಹ್ಲಿ ಫಿಟ್ನೆಸ್ ಗೆ ಹೆಚ್ಚಿನ ಮಹತ್ವ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...