alex Certify
ಕನ್ನಡ ದುನಿಯಾ       Mobile App
       

Kannada Duniya

ಟೆಸ್ಟ್ ನಲ್ಲಿ ಇತಿಹಾಸ ಬರೆದ ಟೀಂ ಇಂಡಿಯಾ

ಅಫ್ಘಾನಿಸ್ತಾನದ ವಿರುದ್ಧ ನಡೆದ ಚೊಚ್ಚಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಇತಿಹಾಸ ಬರೆದಿದೆ. ಅಫ್ಘಾನಿಸ್ತಾನದ ವಿರುದ್ಧ ಇಂಡಿಯಾ 262 ರನ್ ಹಾಗೂ ಇನ್ಸಿಂಗ್ಸ್ ಜಯ ಸಾಧಿಸಿದೆ. ಎರಡನೇ ದಿನವೇ ಟೆಸ್ಟ್ ಪಂದ್ಯ ಮುಗಿಸಿದ ಹೆಗ್ಗಳಿಕೆಗೆ ಟೀಂ ಇಂಡಿಯಾ ಪಾತ್ರವಾಗಿದೆ.

ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ದುಕೊಂಡಿತ್ತು. ಮೊದಲ ಇನ್ನಿಂಗ್ಸ್ ನಲ್ಲಿ 474 ರನ್ ಗಳಿಸಿ ತನ್ನೆಲ್ಲ ವಿಕೆಟ್ ಒಪ್ಪಿಸಿತ್ತು. ಗುರಿ ಬೆನ್ನು ಹತ್ತಿದ ಅಫ್ಘಾನಿಸ್ತಾನಕ್ಕೆ ಅಶ್ವಿನ್ ಹಾಗೂ ರವೀಂದ್ರ ಜಡೇಜಾ ದುಃಸ್ವಪ್ನವಾದ್ರು.

ಅಫ್ಘಾನಿಸ್ತಾನ ಕೇವಲ 109 ರನ್ ಗಳಿಗೆ ಮೊದಲ ಇನ್ನಿಂಗ್ಸ್ ಮುಗಿಸಿ ಫಾಲೋ ಆನ್ ಗೆ ಸಿಲುಕಿತ್ತು. ಎರಡನೇ ಇನ್ನಿಂಗ್ಸ್ ನಲ್ಲಿ ಅಫ್ಘಾನಿಸ್ತಾನ ಕೇವಲ 103 ರನ್ ಗಳಿಸಿ ತನ್ನೆಲ್ಲ ವಿಕೆಟ್ ಒಪ್ಪಿಸ್ತು. ಈ ಮೂಲಕ ಎರಡನೇ ದಿನವೇ ಟೆಸ್ಟ್ ಮುಗಿಸಿದ ಭಾರತ ದಾಖಲೆ ಬರೆದಿದೆ.

ಇಂಗ್ಲೆಂಡ್, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ ಹಾಗೂ ನ್ಯೂಜಿಲ್ಯಾಂಡ್ ಎರಡನೇ ದಿನವೇ ಟೆಸ್ಟ್ ಮುಗಿಸಿ ಈಗಾಗಲೇ ದಾಖಲೆ ಬರೆದಿದೆ.

 

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...