alex Certify
ಕನ್ನಡ ದುನಿಯಾ       Mobile App
       

Kannada Duniya

ನ್ಯೂಜಿಲ್ಯಾಂಡ್ ಟೆಸ್ಟ್ ಸರಣಿಯಿಂದ ಸ್ಟುವರ್ಟ್ ಬಿನ್ನಿ ಔಟ್

kohliap-m

ನ್ಯೂಜಿಲ್ಯಾಂಡ್ ವಿರುದ್ಧ ನಡೆಯುವ ಮೂರು ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟವಾಗಿದೆ. ಇಂದು ಸಭೆ ನಡೆಸಿದ ಬಿಸಿಸಿಐ ಆಯ್ಕೆ ಸಮಿತಿ, ಇಂಡಿಯಾ ತಂಡವನ್ನು ಪ್ರಕಟಿಸಿದೆ. ಸೆಪ್ಟೆಂಬರ್ 22ರಿಂದ ಭಾರತದ ನೆಲದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಮೂರು ಟೆಸ್ಟ್ ಸರಣಿ ನಡೆಯಲಿದೆ.

ಕಳಪೆ ಪ್ರದರ್ಶನದ ಹೊರತಾಗಿಯೂ ರೋಹಿತ್ ಶರ್ಮಾ ಹಾಗೂ ಶಿಖರ್ ಧವನ್  ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದಾರೆ. ಅಜಿಂಕ್ಯ ರಹಾನೆಗೆ ಟೀಂ ಇಂಡಿಯಾದ ಉಪ ನಾಯಕನ ಪಟ್ಟ ನೀಡಲಾಗಿದೆ. ವೆಸ್ಟ್ ಇಂಡೀಸ್  ಪ್ರವಾಸದಿಂದ ವಾಪಸ್ಸಾದ 17 ಆಟಗಾರರಲ್ಲಿ 15 ಆಟಗಾರರಿಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ. ವೆಸ್ಟ್ ಇಂಡೀಸ್ ವಿರುದ್ಧ ನಡೆದ ನಾಲ್ಕು ಟೆಸ್ಟ್ ಸರಣಿಯಲ್ಲಿ ಪಾಲ್ಗೊಂಡಿದ್ದ ಸ್ಟುವರ್ಟ್ ಬಿನ್ನಿ ಹಾಗೂ ಬೌಲರ್ ಶಾರ್ದೂಲ್ ಠಾಕೂರ್ ತಂಡದಿಂದ ಹೊರಬಿದ್ದಿದ್ದಾರೆ.

ಟೀಂ ಇಂಡಿಯಾ ಹೀಗಿದೆ: ವಿರಾಟ್ ಕೊಹ್ಲಿ (ನಾಯಕ)ಅಜಿಂಕ್ಯ ರಹಾನೆ(ಉಪ ನಾಯಕ), ಶಿಖರ್ ಧವನ್, ರೋಹಿತ್ ಶರ್ಮಾ, ಲೋಕೇಶ್ ರಾಹುಲ್, ವೃದ್ಧಿಮಾನ್ ಸಹಾ, ಚೇತೇಶ್ವರ ಪೂಜಾರ, ಮುರಳಿ ವಿಜಯ್, ರವೀಂದ್ರ ಜಡೇಜಾ, ಉಮೇಶ್ ಯಾದವ್, ಅಮಿತ್ ಮಿಶ್ರಾ, ಭುವನೇಶ್ವರ ಕುಮಾರ್, ಆರ್.ಅಶ್ವಿನ್, ಮೊಹಮ್ಮದ್ ಶಮಿ, ಇಶಾಂತ್ ಶರ್ಮಾ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...