alex Certify
ಕನ್ನಡ ದುನಿಯಾ       Mobile App
       

Kannada Duniya

ಕೊಹ್ಲಿ ಬಳಗದ ಮೇಲಿದೆ 25 ವರ್ಷಗಳ ಕಹಿ ದಾಖಲೆ ಅಳಿಸುವ ಜವಾಬ್ದಾರಿ

ಫೆಬ್ರವರಿ 1ರಂದು ದಕ್ಷಿಣ ಆಫ್ರಿಕಾದ ಡರ್ಬನ್ ಕಿಂಗ್ಸ್ ಮೀಡ್ ಕ್ರೀಡಾಂಗಣದಲ್ಲಿ ಟೀಂ ಇಂಡಿಯಾ ಮೊದಲ ಏಕದಿನ ಪಂದ್ಯವನ್ನಾಡಲಿದೆ. ಟೆಸ್ಟ್ ಸರಣಿಯಲ್ಲಿ ಸೋಲುಂಡಿರುವ ಟೀಂ ಇಂಡಿಯಾ ಆ ಸೇಡಿನ ಜೊತೆಗೆ 25 ವರ್ಷಗಳ ಕಹಿ ದಾಖಲೆಯನ್ನು ಅಳಿಸಲು ಪಣತೊಟ್ಟಿದೆ.

25 ವರ್ಷಗಳಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಯಾವುದೇ ಏಕದಿನ ಸರಣಿಯನ್ನು ಕೈವಶ ಮಾಡಿಕೊಂಡಿಲ್ಲ. ಭಾರತ ತಂಡ 1992ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಏಕದಿನ ಸರಣಿಯಾಡಿತ್ತು. ಮೊಹಮ್ಮದ್ ಅಜರುದ್ದೀನ್ ನಾಯಕತ್ವದಲ್ಲಿ ನಡೆದ 7 ಏಕದಿನ ಪಂದ್ಯಗಳ ಸರಣಿಯಲ್ಲಿ ದಕ್ಷಿಣ ಆಫ್ರಿಕಾ 5-2 ಅಂತರದಿಂದ ಸರಣಿ ಕೈವಶ ಮಾಡಿಕೊಂಡಿತ್ತು.

1992ರ ನಂತ್ರ ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಈವರೆಗೆ ನಾಲ್ಕು ಏಕದಿನ ಸರಣಿಯನ್ನಾಡಿದೆ. ಆದ್ರೆ ಯಾವುದೇ ಸರಣಿಯಲ್ಲಿ ಟೀಂ ಇಂಡಿಯಾಕ್ಕೆ ಗೆಲುವು ದಕ್ಕಿಲ್ಲ. ದ್ವಿಪಕ್ಷೀಯ ಏಕದಿನ ಪಂದ್ಯಗಳಲ್ಲಿ ಒಟ್ಟೂ 20 ಪಂದ್ಯಗಳನ್ನಾಡಿರುವ ಇಂಡಿಯಾ ನಾಲ್ಕು ಪಂದ್ಯಗಳಲ್ಲಿ ಮಾತ್ರ ಗೆಲುವು ಸಾಧಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...