alex Certify
ಕನ್ನಡ ದುನಿಯಾ       Mobile App
       

Kannada Duniya

ಟೀಂ ಇಂಡಿಯಾ ಆಟಗಾರರಿಗೆ ಸಿಕ್ಕಿದೆ ಸಿಹಿ ಸುದ್ದಿ

ಮುಂಬೈ: ಭಾರತ ಕ್ರಿಕೆಟ್ ತಂಡದ ಆಟಗಾರರು ವಿಮಾನ ಪ್ರಯಾಣದ ವೇಳೆಯಲ್ಲಿ ಬಿಸಿನೆಸ್ ಕ್ಲಾಸ್ ನಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

ಈ ಹಿಂದೆ ಕ್ಯಾಪ್ಟನ್ ಮತ್ತು ಮುಖ್ಯ ಕೋಚ್ ಗೆ ಮಾತ್ರ ಬಿಸಿನೆಸ್ ಕ್ಲಾಸ್ ನಲ್ಲಿ ಪ್ರಯಾಣಿಸುವ ಸೌಲಭ್ಯವಿತ್ತು. ಉಳಿದ ಆಟಗಾರರು ಎಕಾನಮಿ ಕ್ಲಾಸ್ ನಲ್ಲಿ ಪ್ರಯಾಣಿಸುತ್ತಿದ್ದರು.

ದೇಶದಲ್ಲಿ ನಡೆಯುವ ಕ್ರಿಕೆಟ್ ಸರಣಿಗಳಿಗೆ ಆಟಗಾರರು ವಿಮಾನಗಳಲ್ಲಿ ಎಕಾನಮಿ ಕ್ಲಾಸ್ ಗಳಲ್ಲಿ ಪ್ರಯಾಣಿಸುವಾಗ ಸಹ ಪ್ರಯಾಣಿಕರಿಂದ ಫೋಟೋ ತೆಗೆಸಿಕೊಳ್ಳುವುದು, ಸೆಲ್ಫಿ ತೆಗೆದುಕೊಳ್ಳುವುದು ಸೇರಿ ಹಲವು ಸಮಸ್ಯೆ ಎದುರಿಸುವಂತಾಗಿತ್ತು.

ಅಲ್ಲದೇ ಎಕಾನಮಿ ಕ್ಲಾಸ್ ನಲ್ಲಿ ಲೆಗ್ ಸ್ಪೇಸ್ ಕಡಿಮೆ ಇರುವ ಕಾರಣ ಆಟಗಾರರು ಕೆಲವೊಮ್ಮೆ ತೊಂದರೆ ಅನುಭವಿಸಬೇಕಿತ್ತು. ಈ ಎಲ್ಲಾ ಕಾರಣಗಳಿಂದ ಎಕಾನಮಿ ಕ್ಲಾಸ್ ಬದಲು ಬಿಸಿನೆಸ್ ಕ್ಲಾಸ್ ನಲ್ಲಿ ಪ್ರಯಾಣಿಸಲು ಟೀಂ ಇಂಡಿಯಾ ಆಟಗಾರರಿಗೆ ಅವಕಾಶ ನೀಡುವ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...