alex Certify
ಕನ್ನಡ ದುನಿಯಾ       Mobile App
       

Kannada Duniya

ಬಯಲಾಯ್ತು ಮರಿಯಾ ಶರಪೋವಾ ಗೆಲುವಿನ ಅಸಲಿಯತ್ತು

maria 23

ವಿಶ್ವದ ಟೆನಿಸ್ ರಂಗದಲ್ಲಿ ಮಿಂಚು ಹರಿಸಿದ್ದ ರಷ್ಯಾದ ಮರಿಯಾ ಶರಪೋವಾ ಅವರ ಗೆಲುವಿನ ರಹಸ್ಯ ಬಯಲಾಗಿದೆ. ಮರಿಯಾ ಶರಪೋವಾ ಅವರು ನಿಷೇಧಿತ ಮಾದಕ ವಸ್ತು ಸೇವಿಸಿ ಆಟದಲ್ಲಿ ಭಾಗವಹಿಸಿದ್ದರೆಂಬ ಮಾಹಿತಿ ಹೊರಬಿದ್ದಿದೆ.

ಆಸ್ಟ್ರೇಲಿಯಾದ ಮೆಲ್ಬರ್ನ್ ನಲ್ಲಿ ಏರ್ಪಡಿಸಿದ್ದ ಪಂದ್ಯಾವಳಿಯಲ್ಲಿ ಪಾಲ್ಗೊಂಡಿರುವ ವಿಶ್ವದ ಮಾಜಿ ನಂಬರ್ ಒನ್ ಆಟಗಾರ್ತಿ ಮರಿಯಾ ಶರಪೋವಾ ಅವರನ್ನು ಆ್ಯಂಟಿ ಡೋಂಪಿಂಗ್ ಟೆಸ್ಟ್ ಗೆ ಒಳಪಡಿಸಲಾಗಿತ್ತು. ಪರೀಕ್ಷೆಯ ಸಂದರ್ಭದಲ್ಲಿ ಅವರು ನಿಷೇಧಿತ ಮೆಲ್ಡೋನಿಯಂ ಎಂಬ ದ್ರವ್ಯ ಸೇವಿಸಿದ್ದರು ಎಂಬ ಸಂಗತಿ ಗೊತ್ತಾಗಿದೆ. ಶರಪೋವಾ ಮಾದಕ ದ್ರವ್ಯ ಸೇವಿಸಿರುವುದು ಗೊತ್ತಾಗುತ್ತಿದ್ದಂತೆ ಅವರನ್ನು ಆಸ್ಟ್ರೇಲಿಯಾ ಓಪನ್ ಟೂರ್ನಿಯಿಂದ ಅಮಾನತು ಮಾಡಲಾಗಿದೆ.

ಕಳೆದ ಹಲವು ವರ್ಷಗಳಿಂದ ಅನಾರೋಗ್ಯದ ಕಾರಣ ತಾವು ಕುಟುಂಬದ ವೈದ್ಯರ ಸಲಹೆಯಂತೆ ಔಷಧಿಯನ್ನು ಬಳಸುತ್ತಿದ್ದೇನೆ. ಅದರಲ್ಲಿ ನಿಷೇಧಿತ ವಸ್ತು ಸೇರಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಆದರೂ, ಇದರ ಹೊಣೆಯನ್ನು ನಾನೇ ಹೊರುತ್ತೇನೆ ಎಂದು ಮರಿಯಾ ಶರಪೋವಾ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...