alex Certify
ಕನ್ನಡ ದುನಿಯಾ       Mobile App
       

Kannada Duniya

ಕ್ರಿಕೆಟ್ ಮೈದಾನದಲ್ಲಿ ಬಾಂಬ್ ಸ್ಪೋಟಿಸಿ ಎಂಟು ಮಂದಿ ಸಾವು

ಅಫ್ಘಾನಿಸ್ತಾನದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಸ್ಥಳೀಯ ಕ್ರಿಕೆಟ್ ಆಟಗಾರರನ್ನು ಗುರಿಯಾಗಿಸಿಕೊಂಡು ಬಾಂಬ್ ದಾಳಿ ನಡೆಸಿದ್ದಾರೆ. ಇಲ್ಲಿನ ನಂಗ್ರಾಹಾರ್ ಪ್ರಾಂತ್ಯದಲ್ಲಿ ಕ್ರಿಕೆಟ್ ಮ್ಯಾಚ್ ನಡೆಯುತ್ತಿತ್ತು. ಈ ವೇಳೆ ಇದ್ದಕ್ಕಿದ್ದಂತೆ ಬಾಂಬುಗಳು ಸ್ಪೋಟಿಸಿವೆ.

ಘಟನೆಯಲ್ಲಿ 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಸುಮಾರು 45ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಂಜಾನ್ ಪವಿತ್ರ ತಿಂಗಳಾದ ಕಾರಣ ರಾತ್ರಿ ಪಂದ್ಯಾವಳಿ ಆಡಲು ಆಟಗಾರು ಮತ್ತು ನೂರಾರು ಪ್ರೇಕ್ಷಕರು ಅಲ್ಲಿ ನೆರೆದಿದ್ದರು. ಜಲಾಲಾಬಾದ್ ಕ್ರಿಕೆಟ್ ಮೈದಾನದಲ್ಲಿ ಆಟ ನಡೆಯುತಿತ್ತು. ಈ ವೇಳೆ ಇದ್ದಕ್ಕಿದ್ದಂತೆ ಬಾಂಬುಗಳು ಸ್ಪೋಟಿಸಿವೆ. ಕ್ರಿಕೆಟ್ ವೀಕ್ಷಿಸಲು ಬಂದ ಜನರು ಚೆಲ್ಲಾಪಿಲ್ಲಿಯಾಗಿ ಓಡಿದ್ಧಾರೆ.

ಇದೂವರೆಗೂ ಈ ಬಾಂಬ್ ದಾಳಿ ಹೊಣೆಯನ್ನು ಯಾವುದೇ ಉಗ್ರ ಸಂಘಟನೆ ಹೊತ್ತುಕೊಂಡಿಲ್ಲ. ಆದ್ರೆ ಇಸ್ಲಾಮಿಕ್ ಉಗ್ರರ ಗುಂಪು ಮತ್ತು ತಾಲಿಬಾನ್ ಉಗ್ರರು ಪೂರ್ವ ಆಫ್ಘಾನಿಸ್ತಾನದಲ್ಲಿ ಅದರಲ್ಲೂ ನಂಗ್ರಹಾರ್ ಪ್ರಾಂತ್ಯದಲ್ಲಿ ಬಹಳಷ್ಟು ಸಕ್ರಿಯರಾಗಿದ್ದಾರೆ ಎಂದು ಹೇಳಲಾಗ್ತಿದೆ.

 

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...