alex Certify
ಕನ್ನಡ ದುನಿಯಾ       Mobile App
       

Kannada Duniya

ಟರ್ಕಿಯಲ್ಲಿರುವ ಕನ್ನಡಿಗ ಕ್ರೀಡಾಪಟು ಸುರಕ್ಷಿತ

turkey-coupಟರ್ಕಿಯಲ್ಲಿ ನಡೆದ ಕ್ಷಿಪ್ರ ಕ್ರಾಂತಿಯಲ್ಲಿ ಟರ್ಕಿ ಸಂಸತ್ ಮೇಲೆ ದಾಳಿ ನಡೆಸಿರುವ ಮಿಲಿಟರಿ ಪಡೆ, ಅದನ್ನು ತನ್ನ ಕೈವಶ ಮಾಡಿಕೊಂಡಿದೆ. ಅಲ್ಲದೇ ಅಧ್ಯಕ್ಷ ರಿಸೆಪ್ ಟಯ್ಯಿಪ್ ಎರ್ಡೋಗನ್ ಸರ್ಕಾರವನ್ನು ಕಿತ್ತೊಗೆದಿರುವುದಾಗಿ ಘೋಷಿಸಿದ್ದು, ದೇಶಾದ್ಯಂತ ಕರ್ಫ್ಯೂ ಜಾರಿಗೊಳಿಸಲಾಗಿದೆ.

ಮಿಲಿಟರಿ ಪಡೆ ಹಾಗೂ ಪೊಲೀಸರ ನಡುವೆ ನಡೆದ ಗುಂಡಿನ ದಾಳಿಯಲ್ಲಿ ನಾಗರಿಕರೂ ಸೇರಿದಂತೆ 42 ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದಾರೆಂದು ಹೇಳಲಾಗಿದೆ. ಈ ಮಧ್ಯೆ ಸರ್ಕಾರವನ್ನು ಬೆಂಬಲಿಸಿ ಹಾಗೂ ಮಿಲಿಟರಿಯ ಕ್ಷಿಪ್ರ ಕ್ರಾಂತಿಯನ್ನು ವಿರೋಧಿಸಿ ಸಾರ್ವಜನಿಕರು ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.

ಟರ್ಕಿಯಲ್ಲಿ ನಡೆದ 19 ವರ್ಷದೊಳಗಿನವರ ವಿಶ್ವ ಕುಸ್ತಿ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಕರ್ನಾಟಕದ ಬಾಗಲಕೋಟೆ ಮೂಲದ ಅರ್ಜುನ್ ಸುರಕ್ಷಿತವಾಗಿದ್ದಾರೆಂದು ತಿಳಿದುಬಂದಿದೆ. ಅರ್ಜುನ್ ತಮ್ಮ ಕೋಚ್ ಗೆ ಕರೆ ಮಾಡಿ ತಾವು ಸುರಕ್ಷಿತವಾಗಿರುವ ವಿಷಯ ತಿಳಿಸಿದ್ದು, ಈ ಪಂದ್ಯಾವಳಿಯಲ್ಲಿ ಅರ್ಜುನ್ ಬೆಳ್ಳಿ ಪದಕ ಪಡೆದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...