alex Certify
ಕನ್ನಡ ದುನಿಯಾ       Mobile App
       

Kannada Duniya

ವೈರಲ್ ಆಗಿದೆ ಧೋನಿ ಕುರಿತಾದ ರೋಹಿತ್ ವಿಡಿಯೋ

ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ರೋಹಿತ್ ಶರ್ಮಾ ತಂಡವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿದ್ದಾರೆ. ಇಂದೋರ್ ನ ಹೋಳ್ಕರ್ ಕ್ರೀಡಾಂಗಣದಲ್ಲಿ ನಡೆದ ಶ್ರೀಲಂಕಾ ವಿರುದ್ದದ ಟಿ -20 ಸರಣಿಯ 2 ನೇ ಪಂದ್ಯದಲ್ಲಿ 88 ರನ್ ಅಂತರದಿಂದ ಜಯಗಳಿಸಿ ಭಾರತ ಸರಣಿ ವಶಪಡಿಸಿಕೊಂಡಿದೆ.

ರೋಹಿತ್ ಶರ್ಮಾ ಈ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದು,  43 ಎಸೆತಗಳಲ್ಲಿ 10 ಸಿಕ್ಸರ್, 12 ಬೌಂಡರಿ ಒಳಗೊಂಡ 118 ರನ್ ಗಳಿಸುವ ಮೂಲಕ ಭಾರತದ ಗೆಲುವಿಗೆ ನೆರವಾದರು. ಈ ಮಧ್ಯೆ ಸಾಮಾಜಿಕ ಜಾಲತಾಣಗಳಲ್ಲಿ ರೋಹಿತ್ ಶರ್ಮಾರ ವಿಡಿಯೋ ಒಂದು ವೈರಲ್ ಆಗಿದ್ದು, ಅವರ ನಡೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ರೋಹಿತ್ ಶರ್ಮಾ ಔಟಾದ ವೇಳೆ ಕ್ರೀಡಾಂಗಣದಲ್ಲಿ ಕುಳಿತಿದ್ದ ಟೀಮ್ ಇಂಡಿಯಾ ಕೋಚ್ ರವಿಶಾಸ್ತ್ರಿ, ಈಗ ಯಾರನ್ನು ಬ್ಯಾಟಿಂಗ್ ಗೆ ಕಳಿಸಬೇಕೆಂದು ಸನ್ನೆ ಮಾಡಿದ್ದಾರೆ. ತಾವು ಔಟಾದ ಸಂದರ್ಭದಲ್ಲೂ ನಾಯಕತ್ವ ಗುಣ ಮೆರೆದ ರೋಹಿತ್ ಶರ್ಮಾ, ಮಹೇಂದ್ರ ಸಿಂಗ್ ಧೋನಿಯವರನ್ನು ಕಳಿಸುವಂತೆ ಸಿಗ್ನಲ್ ನೀಡಿದ್ದಾರೆ. ಈ ವಿಡಿಯೋ ಈಗ ವೈರಲ್ ಆಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...