alex Certify
ಕನ್ನಡ ದುನಿಯಾ       Mobile App
       

Kannada Duniya

ಕೊಹ್ಲಿ ಚಾರಿಟಿ ಕಾರ್ಯಕ್ರಮದಲ್ಲಿ ಮದ್ಯದ ದೊರೆ ಮಲ್ಯ..!

mallya-youtube

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಲಂಡನ್ ನಲ್ಲಿ ಜಸ್ಟೀಸ್ ಆ್ಯಂಡ್ ಕೇರ್ ಸಂಸ್ಥೆಗೆ ಹಣ ಸಂಗ್ರಹಿಸಲು ಚಾರಿಟಿ ಕಾರ್ಯಕ್ರಮವೊಂದನ್ನು ಆಯೋಜಿಸಿದ್ದರು. ಈ ಕಾರ್ಯಕ್ರಮಕ್ಕೆ ಗಣ್ಯಾತಿಗಣ್ಯರ ಜೊತೆ ಸಾಲ ಮಾಡಿ ದೇಶಬಿಟ್ಟು ಓಡಿ ಹೋಗಿರುವ ಮದ್ಯದ ದೊರೆ ವಿಜಯ್ ಮಲ್ಯ ಕೂಡ ಆಗಮಿಸಿದ್ದು ವಿಶೇಷವಾಗಿತ್ತು.

ಕೊಹ್ಲಿ ಚಾರಿಟಿ ಕಾರ್ಯಕ್ರಮದಲ್ಲಿ ಟೀಂ ಇಂಡಿಯಾದ ಹಾಲಿ ಹಾಗೂ ಮಾಜಿ ಆಟಗಾರರು ಪಾಲ್ಗೊಂಡಿದ್ದರು. ಈ ಕಾರ್ಯಕ್ರಮಕ್ಕೆ ಮಲ್ಯ ಆಗಮಿಸಿದ್ದು, ಇದ್ರ ವಿಡಿಯೋ ಯೂಟ್ಯೂಬ್ ನಲ್ಲಿ ಹರಿದಾಡ್ತಾ ಇದೆ. ಟೀಂ ಇಂಡಿಯಾ ಆಟಗಾರರು ಆಗಮಿಸಿದ ನಂತ್ರ ಕೊನೆಯಲ್ಲಿ ಬಂದಿದ್ದಾರೆ ಮಲ್ಯ.

ಭಾರತೀಯ ಬ್ಯಾಂಕ್ ಗಳಿಂದ 9 ಸಾವಿರ ಕೋಟಿ ಸಾಲ ಪಡೆದು ಲಂಡನ್ ಗೆ ಹಾರಿರುವ ಮಲ್ಯ ಅಲ್ಲಿ ಐಷಾರಾಮಿ ಜೀವನ ನಡೆಸುತ್ತಿದ್ದಾರೆ. ಪಾಕಿಸ್ತಾನ-ಭಾರತದ ನಡುವೆ ನಡೆದ ಚಾಂಪಿಯನ್ಸ್ ಟ್ರೋಫಿ ಪಂದ್ಯವನ್ನು ವಿಐಪಿ ಸೀಟ್ ನಲ್ಲಿ ಕುಳಿತು ವೀಕ್ಷಣೆ ಮಾಡಿರುವ ಮಲ್ಯ,ಈ ಬಗ್ಗೆ ಟ್ವಿಟ್ ಕೂಡ ಮಾಡಿದ್ದಾರೆ. ಜೊತೆಗೆ ಮುಂದಿನ ಎಲ್ಲ ಪಂದ್ಯಗಳಿಗೆ ಬಂದು ಟೀಂ ಇಂಡಿಯಾಕ್ಕೆ ಬೆಂಬಲ ನೀಡುತ್ತೇನೆಂದು ಟ್ವೀಟರ್ ನಲ್ಲಿ ಹೇಳಿದ್ದಾರೆ.

 

 

 

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...