alex Certify
ಕನ್ನಡ ದುನಿಯಾ       Mobile App
       

Kannada Duniya

ಶತಕದ ಅರ್ಧ ಶತಕ ಸಿಡಿಸಿದ ಕೊಹ್ಲಿ

ಕೋಲ್ಕತ್ತಾದ ಈಡನ್ ಗಾರ್ಡನ್ ನಲ್ಲಿ ನಡೆಯುತ್ತಿರುವ ಭಾರತ-ಶ್ರೀಲಂಕಾ ಮೊದಲ ಟೆಸ್ಟ್ ನ ಕೊನೆ ದಿನ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಶತಕ ಸಿಡಿಸಿದ್ದಾರೆ. 104 ರನ್ ಕಲೆ ಹಾಕಿರುವ ಕೊಹ್ಲಿ, ಶ್ರೀಲಂಕಾ ಗೆಲುವಿನ ಕನಸಿಗೆ ತಣ್ಣೀರೆರಚಿದ್ದಾರೆ. ಟೆಸ್ಟ್ ವೃತ್ತಿ ಜೀವನದ 18ನೇ ಶತಕ ಬಾರಿಸಿರುವ ಕೊಹ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ 50 ಶತಕ ಸಿಡಿಸಿದ ವಿಶ್ವದ ಎಂಟನೇ ಬ್ಯಾಟ್ಸಮನ್ ಆಗಿ ಹೊರ ಹೊಮ್ಮಿದ್ದಾರೆ.

ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ ಅತಿ ಹೆಚ್ಚು ಶತಕ ಸಿಡಿಸಿದ ಪಟ್ಟಿಯಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಮೊದಲಿದ್ದಾರೆ. ಸಚಿನ್ ಶತಕಗಳ ಶತಕ ಸಿಡಿಸಿದ್ದಾರೆ. 71 ಶತಕ ಸಿಡಿಸಿ ರಿಕಿ ಪಾಂಟಿಂಗ್ ಎರಡನೇ ಸ್ಥಾನದಲ್ಲಿದ್ದು, ಕುಮಾರ ಸಂಗಕ್ಕರ್ 63 ಶತಕದೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.

ಜಾಕ್ ಕಾಲೀಸ್ (62 ಶತಕ) ನಾಲ್ಕನೇ ಸ್ಥಾನದಲ್ಲಿದ್ದರೆ. ಹಶೀಮ್ ಆಮ್ಲಾ (54 ಶತಕ),ಜಯವರ್ಧನೆ (54 ಶತಕ),ಬ್ರಿಯಾನ್ ಲಾರಾ  53  ಶತಕ ಬಾರಿಸಿ ಕೊಹ್ಲಿಗಿಂತ ಮುಂದಿದ್ದಾರೆ.

ಇನ್ನು ಭಾರತ ಟೆಸ್ಟ್ ಕ್ರಿಕೆಟ್ ನಲ್ಲಿ ಅತಿ ಹೆಚ್ಚು ಶತಕ ಸಿಡಿಸಿದ ಪಟ್ಟಿಯಲ್ಲಿ ಕೊಹ್ಲಿ 6ನೇ ಸ್ಥಾನದಲ್ಲಿದ್ದಾರೆ. ಸಚಿನ್, ರಾಹುಲ್ ದ್ರಾವಿಡ್, ಸುನಿಲ್ ಗವಾಸ್ಕರ್, ವೀರೇಂದ್ರ ಸೆಹ್ವಾಗ್, ಮೊಹಮ್ಮದ್ ಅಜರುದ್ದೀನ್ ನಂತ್ರದ ಸ್ಥಾನದಲ್ಲಿ ಕೊಹ್ಲಿಯಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...