alex Certify
ಕನ್ನಡ ದುನಿಯಾ       Mobile App
       

Kannada Duniya

ಬಿಸಿಸಿಐ ಪ್ರಶಸ್ತಿ ಸಮಾರಂಭದಲ್ಲಿ ಗಮನ ಸೆಳೆದ ವಿರುಷ್ಕಾ

ಬಿಸಿಸಿಐ ವಾರ್ಷಿಕ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಪತ್ನಿ ಅನುಷ್ಕಾ ಶರ್ಮಾ ಮಿಂಚಿದ್ದಾರೆ. ಬೆಂಗಳೂರಿನಲ್ಲಿ ನಡೆದ ಪ್ರಶಸ್ತಿ ಸಮಾರಂಭದ ಕೇಂದ್ರಬಿಂದುವಾಗಿದ್ದರು ವಿರುಷ್ಕಾ.

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಪಾಲಿ ಉಮ್ರಿಗರ್ (ವರ್ಷದ ಸರ್ವಶ್ರೇಷ್ಠ ಕ್ರಿಕೆಟರ್) ಪ್ರಶಸ್ತಿ ಲಭಿಸಿದೆ. ಅತ್ಯುತ್ತಮ ಫಾರ್ಮ್ ನಲ್ಲಿರುವ ಕೊಹ್ಲಿ 2016-2017 ಹಾಗೂ 2017-2018ರಲ್ಲಿ ಅತ್ಯುತ್ತಮ ಪ್ರದರ್ಶನ ತೋರಿದ್ದಾರೆ. ಈ ಹಿನ್ನೆಲೆಯಲ್ಲಿ ಪಾಲಿ ಉಮ್ರಿಗರ್ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ವಿಶ್ವಕಪ್ ನಲ್ಲಿ ಅತ್ಯುತ್ತಮ ಪ್ರದರ್ಶನ ತೋರಿದ ಹಿನ್ನೆಲೆಯಲ್ಲಿ ಹರ್ಮನ್ಪ್ರೀತ್ ಕೌರ್ ಮತ್ತು ಸ್ಮೃತಿ ಮಂಧಾನ ಮಹಿಳಾ ವಿಭಾಗದಲ್ಲಿ ಸರ್ವಶ್ರೇಷ್ಠ ಕ್ರಿಕೆಟರ್ ಪ್ರಶಸ್ತಿಗೆ ಭಾಜನರಾದ್ರು. ಸಮಾರಂಭದಲ್ಲಿ ಭಾರತದ ವಿರುದ್ಧ ಮೊದಲ ಟೆಸ್ಟ್ ಪಂದ್ಯವನ್ನಾಡುವ ಅಪಘಾನಿಸ್ತಾನದ ತಂಡ ಕೂಡ ಭಾಗಿಯಾಗಿತ್ತು. ಇಂಗ್ಲೆಂಡ್ ಮಾಜಿ ನಾಯಕ ಕೆವಿನ್ ಪೀಟರ್ಸನ್ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಕೊಹ್ಲಿ ಸದ್ಯ ಕುತ್ತಿಗೆ ಗಾಯದಿಂದ ಬಳಲುತ್ತಿದ್ದಾರೆ. ಇದೇ ಕಾರಣಕ್ಕೆ ಕೌಂಟಿ ಕ್ರಿಕೆಟ್ ಆಡ್ತಿಲ್ಲ. ಜೂನ್ 15ರಂದು ಅವ್ರ ಫಿಟ್ನೆಸ್ ಪರೀಕ್ಷೆ ನಡೆಯಲಿದೆ. ಮಂಗಳವಾರವೇ ಕೊಹ್ಲಿ-ಅನುಷ್ಕಾ ಬೆಂಗಳೂರಿಗೆ ಬಂದಿದ್ದಾರೆ. ಬಿಸಿಸಿಐ ಏರ್ಪಡಿಸಿದ್ದ ಪ್ರಶಸ್ತಿ ಸಮಾರಂಭದಲ್ಲಿ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಎಲ್ಲರ ಗಮನ ಸೆಳೆದ್ರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...