alex Certify
ಕನ್ನಡ ದುನಿಯಾ       Mobile App
       

Kannada Duniya

ಸ್ಪೋಟಕ ಬ್ಯಾಟ್ಸ್ ಮನ್ ಕೊಹ್ಲಿಯ ಮತ್ತೊಂದು ದಾಖಲೆ

virat-kohli mn 111

ಮೊಹಾಲಿಯಲ್ಲಿ ನಡೆದ ವಿಶ್ವಕಪ್ ಟಿ-20 ಪಂದ್ಯದಲ್ಲಿ, ಆಸ್ಟ್ರೇಲಿಯಾ ಬೌಲರ್ ಗಳನ್ನು ಚೆಂಡಾಡಿದ ಭಾರತದ ಸ್ಪೋಟಕ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ, ಮಾಡಿದ ದಾಖಲೆ ಒಂದಾ, ಎರಡಾ? ದಾಖಲೆ ಮೇಲೆ ದಾಖಲೆಗಳನ್ನು ಬರೆದಿದ್ದಾರೆ. ಈ ಪಂದ್ಯದಲ್ಲಿ ಕೊಹ್ಲಿ ಅಜೇಯ 82 ರನ್ ಗಳಿಸಿದ್ದರು.

ಕೊಹ್ಲಿ ಬ್ಯಾಟಿಂಗ್ ಅಬ್ಬರಕ್ಕೆ ಹಾಲಿ, ಮಾಜಿ ಕ್ರಿಕೆಟ್ ಆಟಗಾರರು, ಗಣ್ಯರು ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿಯೂ ಅಭಿನಂದನೆಗಳ ಮಹಾಪೂರವೇ ಹರಿದುಬಂದಿತ್ತು. ಇದೀಗ ಕೊಹ್ಲಿ ಮತ್ತೊಂದು ಸಾಧನೆ ಮಾಡಿದ್ದು, ಟಿ-20 ಕ್ರಿಕೆಟ್ ಬ್ಯಾಟಿಂಗ್ ಸಾಮ್ರಾಟನಾಗಿ ಹೊರಹೊಮ್ಮಿದ್ದಾರೆ. ಐಸಿಸಿ ಬಿಡುಗಡೆ ಮಾಡಿರುವ ಟಿ-20 ಅಗ್ರ ಬ್ಯಾಟ್ಸ್ ಮನ್ ಗಳ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಮೊದಲ ಸ್ಥಾನದಲ್ಲಿ ಮಿಂಚಿದ್ದಾರೆ. 871 ಅಂಕಗಳೊಂದಿಗೆ ಕೊಹ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ.

ಆಸ್ಟ್ರೇಲಿಯಾ ಬ್ಯಾಟ್ಸ್ ಮನ್ ಆರೊನ್ ಫಿಂಚ್ 803 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ನ್ಯೂಜಿಲೆಂಡ್ ಆಟಗಾರ ಮಾರ್ಟಿನ್ ಗುಪ್ಟಿಲ್ 762 ಅಂಕ, ಸೌತ್ ಆಫ್ರಿಕಾ ಆಟಗಾರ ಫ್ಲೆಸಿಸ್ 741 ಅಂಕ, ಇಂಗ್ಲೆಂಡ್ ನ ಅಲೆಕ್ಸ್ ಹೆಲ್ಸ್ 737 ಅಂಕಗಳೊಂದಿಗೆ ಕ್ರಮವಾಗಿ 3,4 ಹಾಗೂ 5 ನೇ ಸ್ಥಾನದಲ್ಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...