alex Certify
ಕನ್ನಡ ದುನಿಯಾ       Mobile App
       

Kannada Duniya

ಶತಕ ವಂಚಿತರಾದ್ರೂ 5 ದಾಖಲೆ ಬರೆದ ಕೊಹ್ಲಿ

ಡರ್ಬನ್ ಹಾಗೂ ಕೇಪ್ ಟೌನ್ ನಲ್ಲಿ ಶತಕ ಸಿಡಿಸಿದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಜೊಹಾನ್ಸ್ಬರ್ಗ್ನಲ್ಲೂ ಶತಕ ಸಿಡಿಸುತ್ತಾರೆಂದು ನಿರೀಕ್ಷಿಸಲಾಗಿತ್ತು. ಆದ್ರೆ ದಕ್ಷಿಣ ಆಫ್ರಿಕಾ ವಿರುದ್ಧದ ನಾಲ್ಕನೇ ಏಕದಿನ ಪಂದ್ಯದಲ್ಲಿ ಶತಕ ಸಿಡಿಸಲು ಕೊಹ್ಲಿ ವಿಫಲರಾಗಿದ್ದಾರೆ. ಕೊಹ್ಲಿ 75 ರನ್ ಗೆ ಔಟಾಗಿದ್ದಾರೆ.

ಏಳು ಬೌಂಡರಿ ಹಾಗೂ ಒಂದು ಸಿಕ್ಸರ್ ಸಿಡಿಸಿದ ಕೊಹ್ಲಿ ಸುಲಭವಾಗಿ ತಮ್ಮ 35ನೇ ಶತಕ ಪೂರ್ಣಗೊಳಿಸುತ್ತಾರೆಂದುಕೊಂಡಿದ್ದ ಅಭಿಮಾನಿಗಳಿಗೆ ಸ್ವಲ್ಪ ನಿರಾಸೆಯಾಗಿದೆ. ಆದ್ರೆ ಶತಕ ವಂಚಿತ ಕೊಹ್ಲಿ 5 ದಾಖಲೆಗಳನ್ನು ತಮ್ಮ ಕೈವಶ ಮಾಡಿಕೊಂಡಿದ್ದಾರೆ.

ಏಕದಿನ ಸರಣಿಯಲ್ಲಿ ವೇಗವಾಗಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ನಾಲ್ಕು ಏಕದಿನಗಳಲ್ಲಿ ಕೊಹ್ಲಿ ಒಟ್ಟೂ 393 ರನ್ ಕಲೆ ಹಾಕಿದ್ದಾರೆ. ಈ ಮೂಲಕ ಎಬಿ ಡಿವಿಲಿಯರ್ಸ್ ದಾಖಲೆ ಮುರಿದಿದ್ದಾರೆ. ಡಿವಿಲಿಯರ್ಸ್ 2013ರಲ್ಲಿ ಪಾಕಿಸ್ತಾನದ ವಿರುದ್ಧ ನಡೆದ ಏಕದಿನ ಸರಣಿಯಲ್ಲಿ 367 ರನ್ ಗಳಿಸಿದ್ದರು.

ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ವಿದೇಶಿ ಆಟಗಾರ ಎಂಬ ಹೆಗ್ಗಳಿಕೆಗೂ ಕೊಹ್ಲಿ ಪಾತ್ರರಾಗಿದ್ದಾರೆ. ವಿರಾಟ್ ಕೊಹ್ಲಿ ಒಟ್ಟೂ 679 ರನ್ ಕಲೆ ಹಾಕಿದ್ದಾರೆ. ಟೆಸ್ಟ್ ಸರಣಿಯಲ್ಲಿ ಕೊಹ್ಲಿ ಗಳಿಸಿರುವ ರನ್ 286. ಏಕದಿನ ಪಂದ್ಯದಲ್ಲಿ ಈವರೆಗೆ 393 ರನ್ ಗಳಿಸಿದ್ದಾರೆ. ಈ ಮೂಲಕ ಕೊಹ್ಲಿ, ಲಾರಾ ದಾಖಲೆಯನ್ನು ಮುರಿದಿದ್ದಾರೆ.

ನಾಲ್ಕನೇ ಏಕದಿನ ಪಂದ್ಯದಲ್ಲಿ 75 ರನ್ ಗಳಿಸುವ ಮೂಲಕ ವಿದೇಶಿ ಪ್ರವಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತದ ನಾಯಕ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ. ಈ ಹಿಂದೆ ದಾಖಲೆ ರಾಹುಲ್ ದ್ರಾವಿಡ್ ಹೆಸರಿನಲ್ಲಿತ್ತು. 2006ರಲ್ಲಿ ದ್ರಾವಿಡ್ ವೆಸ್ಟ್ ಇಂಡೀಸ್ ಪ್ರವಾಸದ ವೇಳೆ 645 ರನ್ ಗಳಿಸಿದ್ದರು.

ದಕ್ಷಿಣ ಆಫ್ರಿಕಾ ವಿರುದ್ಧ ಅತಿ ಹೆಚ್ಚು ಇನ್ನಿಂಗ್ಸ್ ಆಡಿದ ಆಟಗಾರರಾಗಿದ್ದಾರೆ ಕೊಹ್ಲಿ. ಈ ಹಿಂದೆ ಗಂಗೂಲಿ ಹೆಸರಿನಲ್ಲಿ ಈ ದಾಖಲೆಯಿತ್ತು. ಗಂಗೂಲಿ ದಕ್ಷಿಣ ಆಫ್ರಿಕಾ ವಿರುದ್ಧ 50.50 ಓವರ್ ಆಡಿದ್ದರು. ಕೊಹ್ಲಿ 61.33 ಓವರ್ ಆಡಿದ್ದಾರೆ.

ಏಕದಿನ ಪಂದ್ಯದ ವೃತ್ತಿ ಜೀವನದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತದ ಆಟಗಾರರ ಪಟ್ಟಿಯಲ್ಲಿ ಕೊಹ್ಲಿ ಐದನೇ ಸ್ಥಾನಕ್ಕೇರಿದ್ದಾರೆ. ಕೊಹ್ಲಿ ಮಾಜಿ ನಾಯಕ ಅಜರುದ್ದೀನ್ ಹಿಂದಿಕ್ಕಿದ್ದಾರೆ. ಅಜರುದ್ದೀನ್ 9378 ರನ್ ಗಳಿಸಿದ್ದರೆ,ಕೊಹ್ಲಿ 9423 ರನ್ ಗಳಿಸಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...