alex Certify
ಕನ್ನಡ ದುನಿಯಾ       Mobile App
       

Kannada Duniya

ಕೊಹ್ಲಿ ಅಸಲಿ ಪರೀಕ್ಷೆ ಇನ್ನೂ ಬಾಕಿ ಇದೆ: ಗಂಗೂಲಿ

virat_gonufcx

ಭಾರತ ಕ್ರಿಕೆಟ್ ನಾಯಕ ವಿರಾಟ್ ಕೊಹ್ಲಿ ಅಸಲಿ ಪರೀಕ್ಷೆ ಇನ್ನೂ ಬಾಕಿ ಇದೆ ಎಂದು ಮಾಜಿ ನಾಯಕ ಸೌರವ್ ಗಂಗೂಲಿ ಹೇಳಿದ್ದಾರೆ. ಇದೇ ವೇಳೆ ಕೊಹ್ಲಿಗೆ ಉತ್ತಮ ನಾಯಕನಾಗುವ ಎಲ್ಲ ಅರ್ಹತೆ ಇದೆ ಎಂದು ಗಂಗೂಲಿ ಹೇಳಿದ್ದಾರೆ.

ಬಾಂಗ್ಲಾದೇಶದ ವಿರುದ್ಧ ಟೆಸ್ಟ್ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿದ ನಂತ್ರ ಮಾತನಾಡಿದ ಗಂಗೂಲಿ ಈ ಹೇಳಿಕೆ ನೀಡಿದ್ದಾರೆ. ದೇಶದಲ್ಲಿ ಕೊಹ್ಲಿ ನಾಯಕತ್ವದಲ್ಲಿ ಟೀಂ ಇಂಡಿಯಾ ಜಯಸಾಧಿಸುತ್ತಿದೆ. ವಿದೇಶಿ ನೆಲದಲ್ಲಿ ಕೂಡ ಕೊಹ್ಲಿ ಪಡೆ ಯಶಸ್ಸು ಕಾಣಲಿದೆ ಎಂಬ ವಿಶ್ವಾಸವಿದೆ ಎಂದು ಗಂಗೂಲಿ ಹೇಳಿದ್ದಾರೆ. ಕೊಹ್ಲಿಗೆ ಗೆಲುವಿನ ಹಸಿವಿದೆ. ಭಾವೋದ್ರಿಕ್ತ ಎಂದು ಗಂಗೂಲಿ ಅಭಿಪ್ರಾಯಪಟ್ಟಿದ್ದಾರೆ.

ಕೊಹ್ಲಿ ನಾಯಕತ್ವದ ಬಗ್ಗೆ ಎರಡು ಪ್ರಶ್ನೆಯೇ ಇಲ್ಲ. ನಾವೆಲ್ಲ ಕೊಹ್ಲಿಯ ನಾಯಕತ್ವದ ಮೇಲೆ ವಿಶ್ವಾಸವಿಟ್ಟಿದ್ದೇವೆ. ಆದ್ರೆ ಕೊಹ್ಲಿಗೆ ಇನ್ನೂ ಪರೀಕ್ಷೆ ಇದೆ. ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ ಹಾಗೂ ಇಂಗ್ಲೆಂಡ್  ನೆಲದಲ್ಲಿ ನಾಯಕತ್ವದ ನಿಜವಾದ ಪರೀಕ್ಷೆ ನಡೆಯಲಿದೆ. ಇದಕ್ಕೆ ನಾವು ಸ್ವಲ್ಪ ದಿನ ಕಾಯಬೇಕೆಂದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...