alex Certify
ಕನ್ನಡ ದುನಿಯಾ       Mobile App
       

Kannada Duniya

ವಿರಾಟ್ ಕೊಹ್ಲಿ ಫ್ಯಾನ್ಸ್ ಗೆ ಇಲ್ಲಿದೆ ಸಂಭ್ರಮದ ಸುದ್ದಿ

koli-ba-icc

ದುಬೈ: ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐ.ಸಿ.ಸಿ.) ಏಕದಿನ ಬ್ಯಾಟ್ಸ್ ಮನ್ ಗಳ ರ್ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮೊದಲ ಸ್ಥಾನದಲ್ಲಿ ಮುಂದುವರೆದಿದ್ದಾರೆ.

873 ಪಾಯಿಂಟ್ಸ್ ಹೊಂದಿರುವ ಅವರು 2 ನೇ ಸ್ಥಾನದಲ್ಲಿರುವ ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ಅವರಿಗಿಂತ 12 ಅಂಕಗಳನ್ನು ವಿಸ್ತರಿಸುವ ಅವಕಾಶವನ್ನು ಹೊಂದಿದ್ದಾರೆ.

ಇಂಡಿಯಾ ಶ್ರೀಲಂಕಾ ಪ್ರವಾಸದಲ್ಲಿದ್ದು, ಭಾನುವಾರ ಡಂಬುಲಾದಲ್ಲಿ ಮೊದಲ ಏಕದಿನ ಪಂದ್ಯ ನಡೆಯಲಿದೆ. ವಿರಾಟ್ ಕೊಹ್ಲಿ ಉತ್ತಮ ಪ್ರದರ್ಶನ ನೀಡಿದಲ್ಲಿ ಅಂಕ ವಿಸ್ತರಣೆಗೆ ಅವಕಾಶವಿದೆ.

ಈ ಪಟ್ಟಿಯಲ್ಲಿ ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ 12 ನೇ, ಶಿಖರ್ ಧವನ್ 13 ನೇ, ರೋಹಿತ್ ಶರ್ಮ 14 ನೇ ಸ್ಥಾನದಲ್ಲಿದ್ದಾರೆ.

ಇನ್ನು ಬೌಲರ್ ಗಳ ಪಟ್ಟಿಯಲ್ಲಿ ಭಾರತದ ಯಾವ ಬೌಲರ್ ಕೂಡ ಟಾಪ್ 10 ರಲ್ಲಿ ಸ್ಥಾನ ಪಡೆದುಕೊಂಡಿಲ್ಲ. ಭುವನೇಶ್ವರ್ ಕುಮಾರ್ 13 ನೇ ಸ್ಥಾನದಲ್ಲಿದ್ದಾರೆ. ತಂಡಗಳ ಪಟ್ಟಿಯಲ್ಲಿ ಟೀಂ ಇಂಡಿಯಾ 3 ನೇ ಸ್ಥಾನದಲ್ಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...