alex Certify
ಕನ್ನಡ ದುನಿಯಾ       Mobile App
       

Kannada Duniya

ಇಂಗ್ಲೆಂಡ್ ಪ್ರವಾಸಕ್ಕೂ ಮುನ್ನ ಬೆವರು ಹರಿಸ್ತಿದ್ದಾರೆ ಕೊಹ್ಲಿ

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಕುತ್ತಿಗೆ ಗಾಯದಿಂದ ಬಳಲುತ್ತಿದ್ದಾರೆ. ಗಾಯದಿಂದಾಗಿ ಕೊಹ್ಲಿ ಇಂಗ್ಲೀಷ್ ಕೌಂಟಿ ಸರ್ಕ್ಯೂಟ್ ನಲ್ಲಿ ಆಡ್ತಿಲ್ಲ. ಇಂಗ್ಲೆಂಡ್ ಪ್ರವಾಸಕ್ಕೆ ಕೊಹ್ಲಿ ಸಿದ್ಧರಾಗ್ತಿದ್ದು, ಕೊಹ್ಲಿ ಫಿಟ್ನೆಸ್ ಪರೀಕ್ಷೆ ಜೂನ್ 15ರಂದು ನಡೆಯಲಿದೆ. ಇದಾದ ನಂತ್ರವೇ ಪ್ರವಾಸಕ್ಕೆ ಕೊಹ್ಲಿ ಲಭ್ಯವಾಗ್ತಾರಾ ಎಂಬುದು ತಿಳಿಯಲಿದೆ.

ಜೂನ್ ಕೊನೆ ವಾರದಲ್ಲಿ ಐರ್ಲೆಂಡ್ ವಿರುದ್ಧ ಎರಡು ಟಿ-20 ಪಂದ್ಯಗಳು ನಡೆಯಲಿವೆ. ಫಿಟ್ನೆಸ್ ಪರೀಕ್ಷೆಯಲ್ಲಿ ಪಾಸ್ ಆಗಲು ಕೊಹ್ಲಿ ಪ್ರಯತ್ನ ನಡೆಸುತ್ತಿದ್ದಾರೆ. 2014ರಲ್ಲಿ ಕೊಹ್ಲಿ ಇಂಗ್ಲೆಂಡ್ ಪ್ರವಾಸ ಕೆಟ್ಟದಾಗಿತ್ತು. ಆ ತಪ್ಪನ್ನು ಸುಧಾರಿಸಿಕೊಳ್ಳುವ ಪ್ರಯತ್ನದಲ್ಲಿ ಕೊಹ್ಲಿಯಿದ್ದಾರೆ.

ಆಗಸ್ಟ್ 1ರಿಂದ ಭಾರತ-ಇಂಗ್ಲೆಂಡ್ ಪಂದ್ಯ ಶುರುವಾಗಲಿದೆ. ಇಂಗ್ಲೆಂಡ್ ವಿರುದ್ಧ 5 ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ. ಇದಕ್ಕೂ ಮುನ್ನ ಐರ್ಲೆಂಡ್ ವಿರುದ್ಧ ಎರಡು ಟಿ-20 ಹಾಗೂ ಇಂಗ್ಲೆಂಡ್ ವಿರುದ್ಧ ಮೂರು ಏಕದಿನ ಪಂದ್ಯ ಹಾಗೂ 3 ಟಿ-20 ಪಂದ್ಯವನ್ನು ಭಾರತ ಆಡಲಿದೆ.

ಮಂಗಳವಾರ ಕೊಹ್ಲಿ ವಿಡಿಯೋ ಒಂದನ್ನು ಪೋಸ್ಟ್ ಮಾಡಿದ್ದಾರೆ. ಫಿಟ್ನೆಸ್ ಪರೀಕ್ಷೆಯಲ್ಲಿ ಪಾಸ್ ಆಗಲು ಕಸರತ್ತು ಮಾಡ್ತಿದ್ದೇನೆಂದು ಕೊಹ್ಲಿ ಹೇಳಿದ್ದಾರೆ. ಎಷ್ಟು ಸುಧಾರಣೆ ಸಾಧ್ಯವೋ ಅಷ್ಟನ್ನು ಮಾಡ್ತಿದ್ದೇನೆ ಎಂದು ಕೊಹ್ಲಿ ಹೇಳಿಕೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...