alex Certify
ಕನ್ನಡ ದುನಿಯಾ       Mobile App
       

Kannada Duniya

ಈ ದಾಖಲೆಯಲ್ಲಿ ಧೋನಿ ಸಮನಾಗಿ ನಿಂತ ಕೊಹ್ಲಿ

ಹೋಲ್ಕರ್ ಮೈದಾನದಲ್ಲಿ ಆಸ್ಟ್ರೇಲಿಯಾ ಬಗ್ಗು ಬಡಿಯುವ ಮೂಲಕ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮಾಜಿ ನಾಯಕ ಎಂ.ಎಸ್. ಧೋನಿ ದಾಖಲೆಗೆ ಸಮನಾಗಿ ನಿಂತಿದ್ದಾರೆ. ಧೋನಿ ಸತತ 9 ಏಕದಿನ ಪಂದ್ಯಗಳನ್ನು ಗೆಲ್ಲುವ ಮೂಲಕ ದಾಖಲೆ ಬರೆದಿದ್ದರು.

ಫೆಬ್ರವರಿ 2008 ರಿಂದ 2009 ರವರೆಗೆ ಭಾರತೀಯ ಕ್ರಿಕೆಟ್ ತಂಡದ ನಾಯಕರಾಗಿದ್ದ ಧೋನಿ ಸತತ 9 ಪಂದ್ಯಗಳನ್ನು ಗೆದ್ದಿದ್ದರು. ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಐದು ಏಕದಿನ ಸರಣಿಯಲ್ಲಿ ಈಗಾಗಲೇ 3-0 ಅಂತರದಲ್ಲಿ ಗೆಲುವು ಸಾಧಿಸಿರುವ ಕೊಹ್ಲಿ ಟೀಂ ಸರಣಿ ತನ್ನದಾಗಿಸಿಕೊಂಡಿದೆ. ಈ ಮೂಲಕ ಧೋನಿ ದಾಖಲೆಗೆ ಸಮನಾಗಿ ನಿಂತಿದೆ.

ಜುಲೈ 6ರಂದು ವೆಸ್ಟ್ ಇಂಡೀಸ್ ವಿರುದ್ಧ 6 ವಿಕೆಟ್ ಗಳ ಜಯ ಸಾಧಿಸಿರುವ ಕೊಹ್ಲಿ ಬಳಗ ಅಲ್ಲಿಂದ ಹಿಂತಿರುಗಿ ನೋಡಿಲ್ಲ. ನಂತ್ರ ಶ್ರೀಲಂಕಾದಲ್ಲಿ ನಡೆದ ಐದು ಏಕದಿನ ಪಂದ್ಯದಲ್ಲಿ ಎದುರಾಳಿ ತಂಡವನ್ನು ಕ್ಲೀನ್ ಸ್ವೀಪ್ ಮಾಡಿತ್ತು. ಈಗ ಆಸ್ಟ್ರೇಲಿಯಾ ವಿರುದ್ಧ ಮೂರು ಪಂದ್ಯದಲ್ಲಿ ಕೊಹ್ಲಿ ಟೀಂ ಜಯ ಸಾಧಿಸಿದೆ.

ಈಗ ಕೊಹ್ಲಿ ಕಣ್ಣು ಬೆಂಗಳೂರಿನಲ್ಲಿ ನಡೆಯುವ ಪಂದ್ಯದ ಮೇಲಿದೆ. ಇಲ್ಲಿಯೂ ಕೊಹ್ಲಿ ಆಸ್ಟ್ರೇಲಿಯಾ ಬಗ್ಗು ಬಡಿದ್ರೆ ಧೋನಿ ದಾಖಲೆಯನ್ನು ಕೊಹ್ಲಿ ಬದಿಗಟ್ಟಲಿದ್ದಾರೆ.

ಸತತ ಗೆಲುವಿನ ಪಟ್ಟಿಯಲ್ಲಿ ಆಸ್ಟ್ರೇಲಿಯಾ ಮೊದಲ ಸ್ಥಾನದಲ್ಲಿದೆ. ಆಸ್ಟ್ರೇಲಿಯಾ ನಿರಂತರವಾಗಿ 21 ಪಂದ್ಯಗಳನ್ನು ಗೆದ್ದು ಮೊದಲ ಸ್ಥಾನ ಕಾಯ್ದಕೊಂಡಿದೆ. ಎರಡನೇ ಸ್ಥಾನದಲ್ಲಿ ದಕ್ಷಿಣ ಆಫ್ರಿಕಾ ಹಾಗೂ ಪಾಕಿಸ್ತಾನವಿದೆ. ಉಭಯ ತಂಡಗಳು  12 ಪಂದ್ಯಗಳಲ್ಲಿ ಸತತ ಗೆಲುವು ಸಾಧಿಸಿವೆ. ನಂತ್ರದ ಸ್ಥಾನದಲ್ಲಿ ವೆಸ್ಟ್ ಇಂಡೀಸ್ ಇದ್ದು, ಅದು 11 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...