alex Certify
ಕನ್ನಡ ದುನಿಯಾ       Mobile App
       

Kannada Duniya

ವಿಶ್ವ ಟೆಸ್ಟ್ ಕ್ರಿಕೆಟ್ ಗೆ ‘ವಿರಾಟ್’ ಕಿಂಗ್…!

ಚೇಸಿಂಗ್ ಸ್ಟಾರ್ ಖ್ಯಾತಿಯ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ ನಲ್ಲಿ ಮತ್ತೊಂದು ತ್ರಿವಿಕ್ರಮ ಸಾಧಿಸಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಕ್ರಿಕೆಟ್ ನಲ್ಲಿ ಅಬ್ಬರದ ಪ್ರದರ್ಶನ ನೀಡಿದ್ದ ಟೀಮ್ ಇಂಡಿಯಾ ನಾಯಕ ಕೊಹ್ಲಿ, ಟೆಸ್ಟ್ ಕ್ರಿಕೆಟ್ ನಲ್ಲಿ ನಂಬರ್ 1 ಸ್ಥಾನಕ್ಕೆ ಬಡ್ತಿ ಪಡೆದಿದ್ದಾರೆ. ವಿರಾಟ್ 934 ಅಂಕಗಳನ್ನು ಕಲೆ ಹಾಕಿ, ಟೆಸ್ಟ್ ನಲ್ಲಿ ನಂಬರ್ 1 ಬ್ಯಾಟ್ಸ್ ಮನ್ ಎನಿಸಿಕೊಂಡಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ನಲ್ಲಿ ತಮ್ಮ ಕ್ಲಾಸ್ ಆಟದ ಪ್ರದರ್ಶನ ನೀಡಿದ್ದ ವಿರಾಟ್, ರನ್ ಗುಡ್ಡೆ ಹಾಕಿದ್ದರು. ಅಲ್ಲದೆ ಇಂಗ್ಲೆಂಡ್ ನೆಲದಲ್ಲಿ ಮೊದಲ ಶತಕ ಬಾರಿಸಿ ಆರ್ಭಟಿಸಿದ್ರು. ಮೊದಲ ಇನ್ನಿಂಗ್ಸ್ ನಲ್ಲಿ 149 ಹಾಗೂ 2ನೇ ಇನ್ನಿಂಗ್ಸ್ ನಲ್ಲಿ 51 ರನ್ ಬಾರಿಸಿ ತಂಡಕ್ಕೆ ನೆರವಾಗಿದ್ರು. ಬಹುದಿನಗಳಿಂದ ಟೆಸ್ಟ್ ಕ್ರಿಕೆಟ್ ನ ನಂಬರ್ 1 ಸ್ಥಾನದಲ್ಲಿದ್ದ ಸ್ಟೀವನ್ ಸ್ಮಿತ್, ಎರಡನೇ ಸ್ಥಾನಕ್ಕೆ ಕುಸಿದಿದ್ದಾರೆ.

ವಿರಾಟ್ ಕೊಹ್ಲಿ, ಟೆಸ್ಟ್ ಹಾಗೂ ಏಕದಿನ ಕ್ರಿಕೆಟ್ ನಲ್ಲಿ ಬೆಸ್ಟ್ ಬ್ಯಾಟ್ಸ್ ಮನ್ ಎನ್ನೋದನ್ನು ಸಾಬೀತು ಮಾಡಿದ್ದಾರೆ. ಅಲ್ಲದೆ ಟೆಸ್ಟ್ ಪಾಯಿಂಟ್ಸ್ ಪಟ್ಟಿಯಲ್ಲಿ ಟಾಪ್ ಐದರಲ್ಲಿ ಸ್ಥಾನ ಪಡೆದಿದ್ದಾರೆ. ವಿರಾಟ್ ಗಿಂತಲೂ ಹೆಚ್ಚು ಅಂಕಗಳನ್ನು ಕಲೆ ಹಾಕಿದವರ ಪಟ್ಟಿಯಲ್ಲಿ ಬ್ರಾಡ್ಮನ್ (961) ಮೊದಲ ಸ್ಥಾನದಲ್ಲಿದ್ದಾರೆ. ಸ್ಟೀವನ್ ಸ್ಮಿತ್ 947 ಅಂಕ, ಜಾಕ್ ಕಾಲಿಸ್ ಹಾಗೂ ಎಬಿ ಡಿವಿಲಿಯರ್ಸ್ 935 ಅಂಕ ಕಲೆ ಹಾಕಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...