alex Certify
ಕನ್ನಡ ದುನಿಯಾ       Mobile App
       

Kannada Duniya

ರನ್ ಬಾರಿಸಲು ವಿರಾಟ್ ಪರದಾಟ, ಟೆಸ್ಟ್ ರ್ಯಾಂಕಿಂಗ್ ನಲ್ಲೂ ಕುಸಿತ

ನೂತನವಾಗಿ ಐಸಿಸಿ ಹೊರಡಿಸಿರುವ ರ್ಯಾಂಕಿಂಗ್ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಕುಸಿತ ಕಂಡಿದ್ದಾರೆ. ಲಾರ್ಡ್ಸ್ ಅಂಗಳದಲ್ಲಿ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿರುವ ಕೊಹ್ಲಿ, ಟೆಸ್ಟ್ ಶ್ರೇಯಾಂಕದಲ್ಲಿ ಎರಡನೇ ಸ್ಥಾನಕ್ಕೆ ಕುಸಿದಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಕೊಹ್ಲಿ ಭರ್ಜರಿ ಪ್ರದರ್ಶನ ನೀಡಿ, ಮೊದಲ ಸ್ಥಾನಕ್ಕೆ ಬಡ್ತಿ ಪಡೆದುಕೊಂಡಿದ್ದರು. ಬರ್ನಿಂಗ್ ಹ್ಯಾಮ್ ನಲ್ಲಿ ವಿರಾಟ್ ಮೊದಲ ಇನ್ನಿಂಗ್ಸ್ ನಲ್ಲಿ 149 ರನ್ ಬಾರಿಸಿದ್ರೆ, ಎರಡನೇ ಇನ್ನಿಂಗ್ಸ್ ನಲ್ಲಿ 51 ರನ್ ಬಾರಿಸಿ ಅಬ್ಬರಿಸಿದ್ದರು. ಪರಿಣಾಮ ಟೆಸ್ಟ್ ರ್ಯಾಂಕಿಂಗ್ ನಲ್ಲಿ ಮೊದಲ ಸ್ಥಾನಕ್ಕೆ ಬಡ್ತಿ ಪಡೆದುಕೊಂಡಿದ್ದರು.

ಲಾರ್ಡ್ಸ್ ಅಂಗಳದಲ್ಲಿ ರನ್ ಬರ ಅನುಭವಿಸಿದ್ದ ಕೊಹ್ಲಿ ಶ್ರೇಯಾಂಕದಲ್ಲಿ ಹಿನ್ನಡೆಯನ್ನು ಅನುಭವಿಸಿದ್ದಾರೆ. ಈ ಮೂಲಕ ಆಸ್ಟ್ರೇಲಿಯಾದ ಸ್ಟೀವನ್ ಸ್ಮಿತ್ ಮತ್ತೊಮ್ಮೆ ಅಗ್ರಸ್ಥಾನದಲ್ಲಿ ರಾರಾಜಿಸುತ್ತಿದ್ದಾರೆ.

ಬರ್ನಿಂಗ್ ಹ್ಯಾಮ್ ಅಂಗಳದಲ್ಲಿ ಕೊಹ್ಲಿ ನೀಡಿದ ಪ್ರದರ್ಶನದ ಫಲವಾಗಿ ವಿರಾಟ್ ಶ್ರೇಯಾಂಕದಲ್ಲಿ ಏರಿಕೆ ಕಂಡಿದ್ದರು. ಕೊಹ್ಲಿಗೂ ಮುನ್ನ 2011 ರಲ್ಲಿ ಭಾರತದ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅಗ್ರ ಸ್ಥಾನ ಪಡೆದು ಬೀಗಿದ್ದರು.

ಎರಡನೇ ಟೆಸ್ಟ್ ನಲ್ಲಿ 9 ವಿಕೆಟ್ ಕಳೆದು ಕಬಳಿಸಿದ ಇಂಗ್ಲೆಂಡ್ ನ ವೇಗಿ ಜೇಮ್ಸ್ ಆ್ಯಂಡರ್ಸನ್ 19 ಅಂಕಗಳನ್ನು ಕಲೆ ಹಾಕಿದ್ದು, ಅಗ್ರ ಸ್ಥಾನದಲ್ಲಿ ಮುಂದುವರೆದಿದ್ದಾರೆ. 903 ಅಂಕಗಳನ್ನು ಕಲೆ ಹಾಕಿರುವ ಆ್ಯಂಡರ್ಸನ್ ದಾಖಲೆ ಬರೆದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...