alex Certify
ಕನ್ನಡ ದುನಿಯಾ       Mobile App
       

Kannada Duniya

ಅಭಿಮಾನಿಗಳಿಗೆ ಬೆಂಬಲಿಸುವಂತೆ ಗೋಗರೆದ ಕೊಹ್ಲಿ

ಭಾರತ ಕ್ರಿಕೆಟ್ ತಂಡವು ಇಂಗ್ಲೆಂಡ್ ನಲ್ಲಿ ಹೀನಾಯ ಪ್ರದರ್ಶನ ನೀಡಿ ಈಗಾಗಲೇ ಎರಡು ಟೆಸ್ಟ್ ಪಂದ್ಯಗಳನ್ನು ಸೋತಿದ್ದು, ಭಾರತೀಯ ಕ್ರಿಕೆಟ್ ಅಭಿಮಾನಿಗಳ ಆಕ್ರೋಶಕ್ಕೆ ಇದು ಕಾರಣವಾಗಿದೆ.

ಭಾರತ ಎರಡನೇ ಟೆಸ್ಟ್ ಪಂದ್ಯದಲ್ಲಿ ಒಂದು ಇನ್ನಿಂಗ್ಸ್ ಹಾಗೂ 159 ರನ್ ಗಳ ಹೀನಾಯ ಸೋಲನ್ನು ಅನುಭವಿಸಿದ್ದು, ಜೊತೆಗೆ ಆಗಸ್ಟ್ 18 ರಿಂದ ಆರಂಭವಾಗಲಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡಿಗೆ ತಿರುಗೇಟು ನೀಡುವ ಧಾವಂತದಲ್ಲಿದೆ.

ಇದು ಭಾರತದ ಆಟಗಾರರಲ್ಲಿ ಮತ್ತಷ್ಟು ಒತ್ತಡವನ್ನು ಹೆಚ್ಚಿಸಿದೆ. ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯವರು ತಮ್ಮ ಫೇಸ್ ಬುಕ್ ಪೇಜಿನಲ್ಲಿ, ಕೆಲವು ಸಲ ನಾವು ಗೆಲ್ಲುತ್ತೇವೆ. ಹಾಗೂ ಕೆಲವು ಸಲ ಸೋಲಿನಿಂದ ಪಾಠವನ್ನು ಕರೆಯುತ್ತೇವೆ. ಅಭಿಮಾನಿಗಳು ನಮ್ಮ ಕೈ ಬಿಡಬಾರದು ಎಂದು ವಿನಂತಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...