alex Certify
ಕನ್ನಡ ದುನಿಯಾ       Mobile App
       

Kannada Duniya

ಮತ್ತೊಂದು ದಾಖಲೆ ಬರೆದ ವಿರಾಟ್ ಕೊಹ್ಲಿ

virat-kohli-novak-djokovic-lionel-

ನವದೆಹಲಿ: ಭಾರತ ಕ್ರಿಕೆಟ್ ತಂಡದ ಸ್ಪೋಟಕ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ, ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಅಮೋಘ ಪ್ರದರ್ಶನ ನೀಡುತ್ತಿದ್ದಾರೆ. ನಾಯಕನಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ್ದಾರೆ.

ಬ್ಯಾಟಿಂಗ್ ನಲ್ಲಿ ಹಲವು ದಾಖಲೆ ಬರೆದ ಕೊಹ್ಲಿ, ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದ್ದಾರೆ. ಸ್ಪೋರ್ಟ್ಸ್ ಮ್ಯಾಗ್ ಜಿನ್ ಪ್ರಕಟಿಸಿರುವ, ವಿಶ್ವದ ಮೋಸ್ಟ್ ಮಾರ್ಕೇಟಬಲ್ ಕ್ರೀಡಾಪಟುಗಳ ಪಟ್ಟಿಯಲ್ಲಿ ಕೊಹ್ಲಿ 3ನೇ ಸ್ಥಾನ ಗಳಿಸಿದ್ದಾರೆ. ಆ ಮೂಲಕ ಫುಟ್ ಬಾಲ್ ತಾರೆ ಲಿಯೋನಲ್ ಮೆಸ್ಸಿ, ನಂಬರ್ ಒನ್ ಟೆನಿಸ್ ಆಟಗಾರ ನೊವಾಕ್ ಜೊಕೋವಿಕ್ ಅವರನ್ನು ಹಿಂದಿಕ್ಕಿದ್ದಾರೆ. ಜೊಕೋವಿಕ್ ಪಟ್ಟಿಯಲ್ಲಿ 23 ನೇ, ಮೆಸ್ಸಿ 27 ನೇ ಸ್ಥಾನದಲ್ಲಿದ್ದಾರೆ.

ಎನ್.ಬಿ.ಎ. ಸ್ಟಾರ್ ಸ್ಟೀಫನ್ ಕರ್ರಿ ಮೊದಲ ಸ್ಥಾನದಲ್ಲಿ, ಫ್ರಾನ್ಸ್ ಫುಟ್ ಬಾಲ್ ತಾರೆ ಪೌಲ್ ವೋಗ್ಬಾ ಎರಡನೇ ಸ್ಥಾನದಲ್ಲಿದ್ದಾರೆ. ಉಸೇನ್ ಬೋಲ್ಟ್ 31 ನೇ ಸ್ಥಾನದಲ್ಲಿದ್ದಾರೆ. ಈ ಮೂಲಕ ಕೊಹ್ಲಿ ಮೂರನೇ ಮಾರ್ಕೇಟಬಲ್ ಸ್ಪೋರ್ಟ್ಸ್ ಪರ್ಸನ್ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...