alex Certify
ಕನ್ನಡ ದುನಿಯಾ       Mobile App
       

Kannada Duniya

ಅವಮಾನಕರ ದಾಖಲೆಗೆ ಸೇರ್ತು ಕೊಹ್ಲಿ ಹೆಸರು

ಗುವಾಹಟಿಯಲ್ಲಿ ನಡೆದ ಭಾರತ-ಆಸ್ಟ್ರೇಲಿಯಾ ಟಿ-20 ಪಂದ್ಯದಲ್ಲಿ ಟೀಂ ಇಂಡಿಯಾದ ಆರಂಭಿಕ ಆಟ ಪ್ರೇಕ್ಷಕರಿಗೆ ಆಶ್ಚರ್ಯ ಹುಟ್ಟಿಸಿತ್ತು. ಅದ್ರ ಜೊತೆಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಶೂನ್ಯ ಸುತ್ತಿ ಪೆವಿಲಿಯನ್ ಗೆ ತೆರಳಿದ್ದು ಪ್ರೇಕ್ಷಕರನ್ನು ಆಘಾತಗೊಳಿಸಿತ್ತು.

ಟಿ-20 ಪಂದ್ಯದಲ್ಲಿ ಎಂಟನೇ ಬಾರಿ ಕೊಹ್ಲಿ ಶೂನ್ಯ ಸುತ್ತಿದ್ದಾರೆ. ಆದ್ರೆ ಅಂತರಾಷ್ಟ್ರೀಯ ಟಿ-20 ಪಂದ್ಯದಲ್ಲಿ ಇದೇ ಮೊದಲು ಕೊಹ್ಲಿ ಶೂನ್ಯಕ್ಕೆ ಔಟ್ ಆಗಿದ್ದಾರೆ. ಐಪಿಎಲ್ ಪಂದ್ಯಗಳ ವಿವಿಧ ಋತುವಿನಲ್ಲಿ ಕೊಹ್ಲಿ ಏಳು ಬಾರಿ ಖಾತೆ ತೆರೆಯದೆ ಪೆವಿಲಿಯನ್ ಗೆ ತೆರಳಿದ್ದರು.

ಟಿ-20 ವೃತ್ತಿಯ 48 ಇನ್ನಿಂಗ್ಸ್ ನಲ್ಲಿ ಕೊಹ್ಲಿ ಈವರೆಗೆ 1852 ರನ್ ಗಳಿಸಿದ್ದಾರೆ. ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಟಿ-20 ಪಂದ್ಯದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಪಟ್ಟಿಯಲ್ಲಿ ಮೊದಲ ಹೆಸರು ಬ್ರೆಂಡನ್ ಮೆಕಲಮ್ (2140) ರದ್ದಾಗಿದ್ದರೆ ತಿಲಕರತ್ನೆ ದಿಲ್ಶಾನ್ (1889) ಎರಡನೇ ಸ್ಥಾನದಲ್ಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...